ಡ್ರಗ್ ಪ್ರಕರಣ- ಡಿಸಿಪಿ ವಿನಯ್ ಗಾಂವ್ಕರ್ ತಂಡದಿಂದ ನಿರೂಪಕಿ ಅನುಶ್ರೀ ವಿಚಾರಣೆ

2:30 PM, Saturday, September 26th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Anushree ಮಂಗಳೂರು:  ನಟಿ ನಿರೂಪಕಿ ಅನುಶ್ರೀ, ಶನಿವಾರ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆ ಮಂಗಳೂರು ಪೊಲೀಸರ ಎದುರು ಹಾಜರಾಗಿ ಸುಮಾರು ನಾಲ್ಕು ಗಂಟೆಗಳ ಕಾಲ ವಿಚಾರಣೆ ಎದುರಿಸಿದರು.

ಪಣಂಬೂರು ಠಾಣೆಯಲ್ಲಿ ಡಿಸಿಪಿ ವಿನಯ್ ಗಾಂವ್ಕರ್,  ಸಿಐ ಶಿವಪ್ರಕಾಶ್  ನೇತೃತ್ವದಲ್ಲಿ ಸುಮಾರು ನಾಲ್ಕು ಗಂಟೆಗಳ ಕಾಲ  ಅನುಶ್ರೀ ವಿಚಾರಣೆ ನಡೆಯಿತು.

ವಿಚಾರಣೆ ಮುಗಿಸಿ ಠಾಣೆಯಿಂದ ಹೊರಬಂದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅನುಶ್ರೀ, “ಪೊಲೀಸರ ಎಲ್ಲಾ ಪ್ರಶ್ನೆಗೆ ಉತ್ತರಿಸಿದ್ದೇನೆ. ಮುಂದೆಯೂ ಸಹಕಾರ ಕೊಡುತ್ತೇನೆ. ನಾನು ಯಾವುದೇ ಡ್ರಗ್ಸ್ ಪಾರ್ಟಿಗಳಲ್ಲಿ ಭಾಗವಹಿಸಿಲ್ಲ ಎಂದು ಹೇಳಿದರು.

ತರುಣ್ ರಾಜ್ 12 ವರ್ಷಗಳ ಹಿಂದೆ 6 ತಿಂಗಳು ನನಗೆ ಡ್ಯಾನ್ಸ್ ಕೊರಿಯೋಗ್ರಾಫ್ ಮಾಡಿದ್ದು ಈ ವೇಳೆ ಮಾತ್ರ ತರುಣ್ ರಾಜ್ ಪರಿಚಯವಾಗಿದೆ. ಡ್ರಗ್ಸ್ ಬಗ್ಗೆ ತರಣ್ ಜೊತೆ ಯಾವುದೇ ಸಂಬಂಧ ಇಲ್ಲ. ನಾನು ತರುಣ್ ಡ್ಯಾನ್ಸ್‌ ಕ್ಲಾಸ್‌ನ ಉದ್ಘಾಟನಾ ಕಾರ್ಯಕ್ರಮಕ್ಕೆ ಹಾಜರಾಗಿದ್ದೆ. ಪೊಲೀಸರು ಇಂದು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದು ಮುಂದೆ ವಿಚಾರಣೆಗೆ ಕರೆದರೆ ಮತ್ತೆ ಹಾಜರಾಗುತ್ತೇನೆ ಎಂದು ಹೇಳಿದ ಅನುಶ್ರೀ ಅವರು, ಡ್ರಗ್ ಮಾಫಿಯಾ ರಾಜ್ಯಕ್ಕೆ ಅಂಟಿರುವ ಭೂತ. ಆ ಭೂತವನ್ನು ಹೋಗಲಾಡಿಸಲು ಪೋಲಿಸರು ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ನಾವು ಸಹಕಾರ ನೀಡಬೇಕು ಎಂದು ಹೇಳಿದ್ದಾರೆ.

ಸಿಸಿಬಿ ಹಾಗೂ ಎಕಾನಮಿಕ್‌ ಮತ್ತು ನಾರ್ಕೊಟಿಕ್‌ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಡ್ರಗ್ಸ್‌ ಸೇವನೆ ಮತ್ತು ಮಾರಾಟ ಆರೋಪದಲ್ಲಿ ಡ್ಯಾನ್ಸರ್ ಕಿಶೋರ್‌ ಅಮನ್‌ ಮತ್ತು ಅಕೀಲ್‌ ನೌಶೀಲ್‌ ನನ್ನು ಬಂಧಿಸಿದ್ದರು. ಅನಂತರ ತರುಣ್‌ ಎಂಬವರನ್ನು ಕೂಡ ವಿಚಾರಣೆ ನಡೆಸಿದ್ದರು. ಈ ಸಂದರ್ಭ ಅನುಶ್ರೀಗೆ ಇವರ ಜತೆ ನಂಟು ಇರುವ ಬಗ್ಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಅನುಶ್ರೀಗೆ ನೋಟಿಸ್‌ ನೀಡಲಾಗಿತ್ತು.

ವಿಚಾರಣೆಗೆ ಹಾಜರಾಗಲು ಸೆ.29ರ ಮೊದಲು ಹಾಜರಾಗುವಂತೆ ಪೊಲೀಸರು ನೋಟಿಸ್‌ನಲ್ಲಿ ತಿಳಿಸಿದ್ದರು. ಆದರೆ ಅನುಶ್ರೀ ಸೆ.25ರಂದೇ ಹಾಜರಾಗುವುದಾಗಿ ತಿಳಿಸಿದ್ದರು. ಅದರಂತೆ ಪೊಲೀಸರು ಅನುಶ್ರೀ ಶುಕ್ರವಾರ ವಿಚಾರಣೆಗೆ ಬರಬಹುದು ಎನ್ನುವ ನಿರೀಕ್ಷೆಯಲ್ಲಿದ್ದರು. ಮಾಧ್ಯಮದವರು ಕೂಡ ಎಸಿಪಿ ಕಚೇರಿ ಎದುರು ಅನುಶ್ರೀ ಆಗಮನದ ನಿರೀಕ್ಷೆಯಲ್ಲಿ ಕಾದು ಕುಳಿತಿದ್ದರು. ಆದರೆ ಸಂಜೆಯವರೆಗೂ ಅನುಶ್ರೀ ವಿಚಾರಣೆಗೆ ಬಂದಿರಲಿಲ್ಲ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English