ಬೆಂಗಳೂರು : ನೂತನ ಪ್ರವಾಸೋದ್ಯಮ ನೀತಿಯು ರಾಜ್ಯದ ಪ್ರಮುಖ ಪ್ರವಾಸಿ ತಾಣಗಳ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಹಾಗೂ ರಾಜ್ಯ ಪ್ರವಾಸೋದ್ಯಮ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ತಿಳಿಸಿದರು.
ಅವರು ಇಂದು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನೂತನ ಪ್ರವಾಸೋದ್ಯಮ ನೀತಿ 2020-25 ರ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿ, ಪ್ರವಾಸೋದ್ಯಮ ಅಭಿವೃದ್ಧಿಯ ಗುರಿ ಸಾಧಿಸಬೇಕಾದರೆ ಸಮರ್ಪಕ ರೂಪುರೇಷೆಗಳು ಹಾಗೂ ಯೋಜನೆಗಳನ್ನು ಒಳಗೊಂಡ ಒಂದು ನೀತಿಯನ್ನು ರೂಪಿಸಿಕೊಳ್ಳುವುದು ಅನಿವಾರ್ಯವಾಗಿದ್ದು, ಪ್ರವಾಸೋದ್ಯಮದ ಸಮಗ್ರ ಹಾಗೂ ಸರ್ವತೋಮುಖ ಅಬಿವೃಧಿಗಾಗಿ ತನ್ನ ಮುಂದಿನ ಐದು ವರ್ಷಗಳ ಕಾರ್ಯಕ್ರಮಗಳನ್ನು ಮತ್ತು ಯೋಜನೆಗಳನ್ನು ಒಳಗೊಂಡ “ಕರ್ನಾಟಕ ಪ್ರವಾಸೋದ್ಯಮ ನೀತಿ” 2020-25 ನ್ನು ಇಲಾಖೆಯು ರೂಪಿಸಿದೆ ಎಂದರು.
ಕರ್ನಾಟಕ ರಾಜ್ಯವು ತನ್ನ ಭವ್ಯ ಪರಂಪರೆ ಹಾಗೂ ಸಾಂಸ್ಕøತಿಕ ಇತಿಹಾಸವನ್ನು ಸಾರುವ ಶಿಲ್ಪ ಕಲೆಯ ನೆಲವೀಡಾಗಿದ್ದು, ವಿವಿಧ ಪರಿಸರ ಹಾಗೂ ಸಂಸ್ಕøತಿಯನ್ನು ಬಿಂಬಿಸುವ ವೈವಿಧ್ಯಮಯ ಪ್ರವಾಸಿ ತಾಣಗಳನ್ನು ಹೊಂದಿರುವ ರಾಜ್ಯವಾಗಿದೆ. ರಾಷ್ಟ್ರೀಯ ಉದ್ಯಾನವನ, ವನ್ಯಜೀವಿ ಅಭಯಾರಣ್ಯ ಗಿರಿಧಾಮಗಳು, ಭವ್ಯ ಜಲಪಾತಗಳು, ನದಿಗಳು ಹಾಗೂ ದೇವಾಲಯಗಳನ್ನು ಹೊಂದಿರುವ ಕರ್ನಾಟಕ ಪ್ರವಾಸೋದ್ಯಮ “ಒಂದು ರಾಜ್ಯ ಹಲವು ಜಗತ್ತುಗಳು” ಎಂಬ ತನ್ನ ಘೋಷ ವಾಕ್ಯದ ಪ್ರತಿಬಿಂಬದಂತಿದೆ ಎಂದರು.
ರಾಜ್ಯದ ಪ್ರವಾಸಿತಾಣಗಳನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ದೇಶ-ವಿದೇಶಗಳಿಂದ ಪ್ರವಾಸಿಗರನ್ನು ಆಕರ್ಷಿಸಲು ಮಾರ್ಗೋಪಾಯಗಳನ್ನು ಕಂಡುಕೊಳ್ಳಲಾಗುವುದು. ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಸ್ಥಳೀಯ ಸಮುದಾಯಗಳ ಪಾಲ್ಗೊಳ್ಳುವಿಕೆ ಪ್ರಮುಖವಾಗಲಿದ್ದು, ಹೆಚ್ಚಿನ ಆದಾಯ ಹಾಗೂ ಕೌಶಲ್ಯಾಭಿವೃದ್ಧಿಗೂ ದಾರಿ ಮಾಡಿಕೊಡಲಿದೆ. ಇಲಾಖೆಯ ವಿವಿಧ ಕಾರ್ಯಕ್ರಮಗಳ ಮೂಲಕ ಸ್ಥಳೀಯರಿಗೆ ತರಬೇತಿ ಮತ್ತು ಉದ್ಯೋಗವಕಾಶಗಳನ್ನು ಒದಗಿಸುವ ಒಂದು ವಿಶಾಲವಾದ ದೃಷ್ಟಿಕೋನವನ್ನು ಈ ನೀತಿ ಹೊಂದಿದೆ ಎಂದರು.
ವಿಶ್ವವನ್ನೇ ಕಾಡುತ್ತಿರುವ ಕೊರೋನಾ ಸಾಂಕ್ರಾಮಿಕ ರೋಗದಿಂದ ವಿಶ್ವದಲ್ಲಿ ಅತಿ ಹೆಚ್ಚು ನಷ್ಟವನ್ನು ಅನುಭವಿಸಿರುವ ಉದ್ಯಮ ಎಂದರೆ ಪ್ರವಾಸೋದ್ಯಮ. ಇಂತಹ ವಿಷಮ ಪರಿಸ್ಥಿತಿಯಲ್ಲಿ ನಲುಗಿರುವ ರಾಜ್ಯದ ಪ್ರವಾಸೋದ್ಯಮದ ಪುನ:ಶ್ಚೇತನಕ್ಕಾಗಿ ಈ ನೀತಿಯು ಪೂರಕವಾಗಲಿದೆ ಎಂದರು.
ಬದಲಾದ ತಂತ್ರಜ್ಞಾನಕ್ಕೆ ಅನುಗುಣವಾಗಿ ಪ್ರವಾಸೋದ್ಯಮದಲ್ಲಿ ತಾಂತ್ರಿಕತೆಗಳನ್ನು ಮತ್ತು ಡಿಜಿಟಲ್ ಉಪಕ್ರಮಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸಲಾಗಿದೆ. ಪ್ರವಾಸಿ ತಾಣಗಳನ್ನು ಆಯ್ಕೆ ಮಾಡುವಂತಾಗಲು ವಿಶ್ವದರ್ಜೆಯ ಪ್ರವಾಸಿ ಮೂಲಸೌಕರ್ಯಗಳನ್ನು ಒದಗಿಸುವ ಗುರಿಯನ್ನು ಹೊಂದಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ “ಕಾಡುಗೊಲ್ಲ ಅಭಿವೃದ್ಧಿ ನಿಗಮವನ್ನು” ಸ್ಥಾಪನೆ ಮಾಡಲಾಗುವುದು ಎಂದರು.
ಸಮಾರಂಭದಲ್ಲಿ ಕಂದಾಯ ಸಚಿವ ಆರ್.ಅಶೋಕ್, ಶಾಸಕರಾದ ನಾರಾಯಣ ಸ್ವಾಮಿ, ಕುಡಿಯುವ ನೀರು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾದ ರಾಜುಗೌಡÀ, ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಶೃತಿ, ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೈಕ್ ರ್ಯಾಲಿಗೆ ಚಾಲನೆ : ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ವಿಧಾನಸೌಧದ ಮುಂದೆ ಬೈಕ್ ರ್ಯಾಲಿಗೆ ಚಾಲನೆ ನೀಡಿ, ಐದು ಜನ ಮಹಿಳಾ ತಂಡವನ್ನು ಮೈಸೂರಿಗೆ ಕಳುಹಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್.ಅಶೋಕ್, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕøತಿ, ಯುವ ಸಬಲೀಕರಣ ಮತ್ತು ಕ್ರೀಡೆಗಳ ಸಚಿವ ಸಿ.ಟಿ. ರವಿ ಉಪಸ್ಥಿತರಿದ್ದರು. ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶೃತಿ ಸ್ವಾಗತಿಸಿದರು.
Click this button or press Ctrl+G to toggle between Kannada and English