ಮಂಗಳೂರು : ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ರವಿವಾರ ದುಬೈನಿಂದ ಬಂದಿಳಿದ ಪ್ರಯಾಣಿಕನಿಂದ 33.88 ಲಕ್ಷ ರೂ. ಮೌಲ್ಯದ 671 ಗ್ರಾಂ ತೂಕದ 6 ಚಿನ್ನದ ಬಿಸ್ಕತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ದುಬೈ- ಮಂಗಳೂರು- ಹೈದರಾಬಾದ್ ವಿಮಾನದಲ್ಲಿ ಚಿನ್ನದ ಬಿಸ್ಕತ್ತುಗಳನ್ನು ಒಳಗೆ ಸೀಟಿನ ಅಡಿಯಲ್ಲಿ ಅಡಗಿಸಿಡಲಾಗಿತ್ತು.
ದುಬೈನಿಂದ ಮಂಗಳೂರು ತನಕ ಅಂತಾರಾಷ್ಟ್ರೀಯ ಯಾನವಾಗಿ ಹಾಗೂ ಮಂಗಳೂರು- ಹೈದರಾಬಾದ್ ನಡುವೆ ದೇಶೀಯ ವಿಮಾನವಾಗಿ ಕಾರ್ಯಾಚರಿಸುತ್ತಿದ್ದು, ಮಂಗಳೂರಿನಿಂದ ಹೈದರಾಬಾದ್‌ಗೆ ಪ್ರಯಾಣಿಸುವ ಪ್ರಯಾಣಿಕ ಈ ಚಿನ್ನವನ್ನು ಸಂಗ್ರಹಿಸಿ ಕೊಂಡೊಯ್ಯುವ ಉದ್ದೇಶ ಹೊಂದಿದ್ದ ಎನ್ನಲಾಗಿದೆ.
ದೇಶೀಯ ಯಾನ ಆಗಿರುವುದರಿಂದ ವಿಮಾನದಲ್ಲಿ ಕಟ್ಟುನಿಟ್ಟಿನ ತಪಾಸಣೆ ಇರಲಾರದು ಎಂದು ಭಾವಿಸಿ ಈ ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಲಾಗಿತ್ತು ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Click this button or press Ctrl+G to toggle between Kannada and English