ಸ್ಕೂಟರ್ ಮತ್ತು ಟ್ಯಾಂಕರ್ ಡಿಕ್ಕಿ- ತಂದೆ ಮಗಳು ಸಾವು

2:55 PM, Tuesday, September 29th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Karawar Accidentಕಾರವಾರ: ಸ್ಕೂಟರ್ ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಮಂಗಳವಾರ  ನಡೆದಿದೆ.

ಯಲ್ಲಾಪುರದ ಅರೆಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಘಟನೆ ನಡೆದಿದೆ. ವಿನೋದ್ ಕಿಂದಳಕರ್ (56) ಹಾಗೂ ಅವರ ಮಗಳು ಸುನೇಹಾ ಕಿಂದಳಕರ್ (12) ಮೃತ ದುರ್ದೈವಿಗಳು.

ವಿನೋದ್ ಕಿಂದಳಕರ್ ಯಲ್ಲಾಪುರದ ಅಗ್ನಿಶಾಮಕ ದಳ ಠಾಣೆಯಲ್ಲಿ ಪ್ರಮುಖ ಅಗ್ನಿಶಾಮಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮಗಳನ್ನು ಯಲ್ಲಾಪುರದಿಂದ ತಮ್ಮ ಸ್ವಂತ ಊರಾದ ಅಂಕೋಲಾ ತಾಲೂಕಿನ ಹಾರವಾಡಾಕ್ಕೆ ಬಿಡಲು ಹೊರಟಿದ್ದರು ಎನ್ನಲಾಗಿದೆ. ಆದರೆ ಅರೆಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗ್ಯಾಸ್ ಟ್ಯಾಂಕರ್ ಹಾಗೂ ಸ್ಕೂಟರ್ ಮುಖಾಮುಖಿ ಡಿಕ್ಕಿಯಾಗಿವೆ.

ಪರಿಣಾಮ ಸ್ಥಳದಲ್ಲೇ ತಂದೆ ಮಗಳು ಮೃತಪಟ್ಟಿದ್ದಾರೆ. ಯಲ್ಲಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English