ಬಲ್ಮಠ ಬ್ಯಾಂಕ್ ಆಫ್ ಬರೋಡದ ಶಾಖಾ ಕಚೇರಿಯಲ್ಲಿ ಬೆಂಕಿ ಅವಘಡ

12:31 PM, Wednesday, September 30th, 2020
Share
1 Star2 Stars3 Stars4 Stars5 Stars
(No Ratings Yet)
Loading...

Bankof Baroda ಮಂಗಳೂರು : ನಗರದ ಬಲ್ಮಠದಲ್ಲಿರುವ ಬ್ಯಾಂಕ್ ಆಫ್ ಬರೋಡದ ಶಾಖಾ ಕಚೇರಿಯಲ್ಲಿ ಇಂದು ಮುಂಜಾನೆ ಸಂಭವಿಸಿದ  ಬೆಂಕಿ‌ ಅನಾಹುತದಲ್ಲಿ ಐದು ಹವಾನಿಯಂತ್ರಣ ಯಂತ್ರ, ಕಂಪ್ಯೂಟರ್ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳು ಸುಟ್ಟುಹೋಗಿವೆ.

ಮುಂಜಾನೆ ‌5:30ರಿಂದ 6 ಗಂಟೆಯ‌ ಮಧ್ಯೆ‌ ಈ ಅನಾಹುತ ಸಂಭವಿಸಿದೆ ಎನ್ನಲಾಗುತ್ತಿದೆ. ಕೂಡಲೇ  ಅಗ್ನಿಶಾಮಕ ದಳ ಸ್ಥಳಕ್ಕೆಆಗಮಿಸಿ ಬೆಂಕಿಯನ್ನು ನಂದಿಸಲು ಸಫಲವಾಯಿತು.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ‌ ಅನಾಹುತ ನಡೆದಿದೆ ಎಂದು ಹೇಳಲಾಗುತ್ತಿದೆ. ದುರಂತದ ಬಗ್ಗೆ ‌ಬ್ಯಾಂಕ್ ಅಧಿಕಾರಿಗಳು ಮತ್ತು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗ‌ ಹೆಚ್ಚಿನ‌ ಅನಾಹುತ‌ ತಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English