ಬಂಟ್ವಾಳ : ಫರಂಗಿಪೇಟೆ ಸಮೀಪದ ಕುಂಪಜಲು ಎಂಬಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಾರಗಳ ಹಿಂದೆ ಪ್ರಕರಣ ದಾಖಲಾಗಿತ್ತು. ಆದರೆ ಅಪರಿಚಿತ ಆರೋಪಿ ಪತ್ತೆಯಾಗಿರಲಿಲ್ಲ.
ಕಳೆದ ಕೆಲವು ತಿಂಗಳಿನಿಂದ ಕುಂಪಣಮಜಲು ಪರಿಸರದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುವ ಯುವತಿಯರಿಗೆ ಈತ ಕಿರುಕುಳ ನೀಡುತ್ತಿದ್ದ ಬಗ್ಗೆ ಸಾರ್ವಜನಿಕ ದೂರುಗಳು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣದ ಜಾಡು ಹಿಡಿದ ಬಂಟ್ವಾಳ ಗ್ರಾಮಾಂತರ ಠಾಣಾ ಎಸ್.ಐ. ಪ್ರಸನ್ನ ನೇತೃತ್ವದ ತಂಡ ಅಪ್ರಾಪ್ತ ಬಾಲಕನೊಬ್ಬನನ್ನು ಬಂಧಿಸಿದೆ. ಬಾಲಕನನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಿದಾಗ ಆತ ತಪ್ಪು ಒಪ್ಪಿಕೊಂಡಿದ್ದಾನೆ.
ಪ್ರಸ್ತುತ ಹುಡುಗಿಯರನ್ನು ಚುಡಾಯಿಸುತ್ತಿದ್ದುದಲ್ಲದೆ. ಬಾಲಕಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಬಾಲಕನ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Click this button or press Ctrl+G to toggle between Kannada and English