ಮಂಗಳೂರು : ದ.ಕ. ಜಿಲ್ಲಾಡಳಿತ ಮತ್ತು ಭಾರತ್ ಸೇವಾದಳದ ಆಶ್ರಯದಲ್ಲಿ ಪುರಭವನದ ಎದುರಿನ ಗಾಂಧಿ ಪ್ರತಿಮೆ ಬಳಿ ಗುರುವಾರ ಬೆಳಗ್ಗೆ ಗಾಂಧಿ ಜಯಂತಿ ಆಚರಣೆ ನಡೆಯಿತು.
ಗಾಂಧಿ ಟೋಪಿ ಧರಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇತರ ಗಣ್ಯರು ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮಹಾತ್ಮ ಗಾಂಧೀಜಿ ಪ್ರೀತಿ, ನ್ಯಾಯ ಪರವಾಗಿ ನಿಷ್ಠವಾಗಿ ಹೋರಾಡಿ ದೇಶ ಪ್ರೇಮದೊಂದಿಗೆ ಸ್ವಾತಂತ್ರ್ಯ ತಂದವರು. ಶಾಂತಿ ಮತ್ತು ಸೌಹಾರ್ದದೊಂದಿಗೆ ದೇಶವನ್ನು ಒಂದುಗೂಡಿಸಿದ ಅವರ ಆದರ್ಶ ಗಳು ಇಂದಿಗೂ ಪ್ರಸ್ತುತ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಮೇಯರ್ ದಿವಾಕರ ಪಾಂಡೇಶ್ವರ, ಉಪಮೇಯರ್ ವೇದಾವತಿ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಮುಡಾ ಅಧ್ಯಕ್ಷ ರವಿಶಂಕರ ಮಿಜಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ್, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಡಿಸಿಪಿ ಅರುಣಾಂಶಗಿರಿ, ಎಸಿ ಮದನ್ ಮೋಹನ್, ಸ್ಮಾರ್ಟ್ ಸಿಟಿ ಎಂ.ಡಿ. ಮುಹಮ್ಮದ್ ನಝೀರ್, ತಹಶೀಲ್ದಾರ್ ಗುರುಪ್ರಸಾದ್, ಭಾರತ್ ಸೇವಾದಳದ ಕಾರ್ಯದರ್ಶಿ ಟಿ.ಕೆ.ಸುಧೀರ್ ಉಪಸ್ಥಿತರಿದ್ದರು.
ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಭಾರತ್ ಸೇವಾದಳದ ಬಶೀರ್ ಬೈಕಂಪಾಡಿ ಸ್ವಾಗತಿಸಿದರು. ಸೇವಾದಳದ ಮಂಜೇಗೌಡ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
Click this button or press Ctrl+G to toggle between Kannada and English