- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಡ್ರಗ್ ಪ್ರಕರಣ : ಕಿಶೋರ್ ನ ಹಳೆ ಮಿತ್ರ ಸ್ಯಾಮ್ ಫರ್ನಾಂಡಿಸ್‍ನನ್ನು ಬಂಧಿಸಿದ ಸಿಸಿಬಿ ಪೊಲೀಸರು

samu [1]ಮಂಗಳೂರು: ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು  ಮತ್ತೊಬ್ಬ ಡ್ಯಾನ್ಸ್ ಕೊರಿಯೋಗ್ರಾಫರನ್ನು ಪೊಲೀಸರು ಬಂಧಿಸಿದ್ದಾರೆ. ಕಿಶೋರ್ ನ ಹಳೆ ಮಿತ್ರ ಸ್ಯಾಮ್ ಫರ್ನಾಂಡಿಸ್‍ನನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಕಿಶೋರ್ ನಡೆಸುತ್ತಿದ್ದ ಪಾರ್ಟಿಗಳಲ್ಲಿ ಅನುಶ್ರೀಯನ್ನು ನೋಡಿರುವುದಾಗಿ ಸ್ಯಾಮ್ ಫರ್ನಾಂಡಿಸ್ ಪೊಲೀಸರ ಮುಂದೆ ಹೇಳಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಯಾಮ್ ವಿಚಾರಣೆ ಮಾಡಿದ ಬಳಿಕ ನಿರೂಪಕಿ ಅನುಶ್ರೀ ಬಗೆಗಿನ ಮತ್ತಷ್ಟು ಮಾಹಿತಿಗಳು ಸಿಸಿಬಿ ಪೊಲೀಸರಿಗೆ ಲಭ್ಯವಾಗಿವೆ.

ಅನುಶ್ರೀ ಸೇರಿದಂತೆ ಬೆಳ್ಳಿತೆರೆ, ಕಿರುತೆರೆ ಹಾಗೂ ರಿಯಾಲಿಟಿ ಶೋನ ನಟ, ನಟಿಯರು ಪಾರ್ಟಿಯಲ್ಲಿ ಭಾಗವಹಿಸಿದ್ದರು ಎಂದು ಸ್ಯಾಮ್ ಬಾಯ್ಬಿಟ್ಟಿದ್ದಾನೆ. ಮಂಗಳೂರು ಮತ್ತು ಬೆಂಗಳೂರಿನಲ್ಲಿ ಪಾರ್ಟಿ ನಡೆಯುತ್ತಿತ್ತು. ಎರಡೂ ಕಡೆ ನಡೆಯುತ್ತಿದ್ದ ಪಾರ್ಟಿಗಳಲ್ಲಿ ಸ್ಯಾಮ್ ಭಾಗವಹಿಸಿದ್ದಾಗಿ ಹೇಳಿದ್ದಾನೆ.

ಕಿಶೋರ್ ಅರೆಸ್ಟ್ ಆದ ದಿನವೇ ಆತನನ್ನು ಪ್ರಕರಣದಿಂದ ಬಿಡುಗಡೆಗೊಳಿಸಲು ಮಂಗಳೂರಿನ ಶಾಸಕರೊಬ್ಬರು ಪ್ರಯತ್ನಿಸಿರುವುದು ಬೆಳಕಿಗೆ ಬಂದಿದೆ. ಕಿಶೋರ್ ಪಾರ್ಟಿಯಲ್ಲಿ ಭಾಗವಹಿಸಿದ್ದ ಮತ್ತು ಕ್ರಿಕೆಟ್ ಬುಕ್ಕಿಯಾಗಿರುವ ಮಂಗಳೂರಿನ ಪ್ರತಿಷ್ಠಿತ ಯುವ ಉದ್ಯಮಿಯೋರ್ವ ಶಾಸಕನ ಮೂಲಕ ಕಿಶೋರ್ ಶೆಟ್ಟಿಯನ್ನು ಕೇಸ್ ನಿಂದ ತೆಗೆಯಲು ಯತ್ನಿಸಿರೋದಾಗಿ ತಿಳಿದುಬಂದಿದೆ.