ಉತ್ತರ ಪ್ರದೇಶದ ಬಲ ರಾಮ್ ಪುರ ಗ್ರಾಮದಲ್ಲಿ ಮತ್ತೊಂದು ದಲಿತ ಯುವತಿಯ ಅತ್ಯಾಚಾರ

9:09 PM, Friday, October 2nd, 2020
Share
1 Star2 Stars3 Stars4 Stars5 Stars
(No Ratings Yet)
Loading...

Shahid-and-Sahilಲಖನೌ: ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ರೀತಿಯಲ್ಲಿ ಮತ್ತೊಂದು ಪ್ರಕರಣ ವರದಿಯಾಗಿದೆ. ಹತ್ರಾಸ್ ನಿಂದ 500 ಕಿಲೋ ಮೀಟರ್ ದೂರದಲ್ಲಿರುವ ಬಲ ರಾಮ್ ಪುರ ಗ್ರಾಮದಲ್ಲಿ ಮಂಗಳವಾರ ಸಂಜೆ 22 ವರ್ಷದ ದಲಿತ ಯುವತಿ ಮೇಲೆ ಕಾಮುಕರು ಹಲ್ಲೆ ನಡೆಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಪರಿಣಾಮ ಆಕೆ ಲಖನೌನ ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಈ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ, ಮರಣೋತ್ತರ ಪರೀಕ್ಷೆಯಲ್ಲಿ ಗಾಯಗಳಾದ ಬಗ್ಗೆ ವರದಿಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಕಾಲೇಜಿಗೆ ಪ್ರವೇಶಾತಿ ಪಡೆಯಲು ಬೆಳಗ್ಗೆ ಹೋಗಿದ್ದ ಯುವತಿಯನ್ನು ಅಪಹರಣ ಮಾಡಲಾಗಿತ್ತು. ಶಾಹಿದ್ ಮತ್ತು ಸಾಹಿಲ್ ಯುವತಿಯನ್ನು  ಮೇಲೆ ಅತ್ಯಾಚಾರ ಎಸಗಿದ್ದಾರೆ. ಆಕೆ ಮನೆಗೆ ವಾಪಸ್ಸಾಗದಿದ್ದಾಗ ಕುಟುಂಬದವರು ಶೋಧ ಕಾರ್ಯ ನಡೆಸುತ್ತಿದ್ದಾಗ ಸಂಜೆ 7 ಗಂಟೆ ಸುಮಾರಿಗೆ ಹಲ್ಲೆಕೋರರು ಇ- ರಿಕ್ಷಾದಲ್ಲಿ ಆಕೆಯನ್ನು ಮನೆಗೆ ಕಳುಹಿಸಿದ್ದರು. ಆಕೆಯ ಕಾಲು, ಬೆನ್ನಿನ ಮೇಲೆ ಹಲ್ಲೆ ನಡೆಸಲಾಗಿತ್ತು. ಆಟೋ ರಿಕ್ಷಾ ಚಾಲಕ ಮನೆಗೆ ಮುಂಭಾಗ ಆಕೆಯನ್ನು ಎಸೆದು ಹೋಗಿದ್ದ. ಆಕೆಗೆ ಎದ್ದು ನಿಲ್ಲುವ ಅಥವಾ ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಅತ್ಯಾಚಾರಕ್ಕೊಳಗಾದ ಯುವತಿಯ ತಾಯಿ ಕಣ್ಣೀರು ಹಾಕಿದ್ದಾರೆ.

ನಂತರ ಸ್ಥಳೀಯ ಆಸ್ಪತ್ರೆಗೆ ಆಕೆಯನ್ನು ಕೊಂಡೊಯ್ಯಲಾಯಿತು. ಆದರೆ, ಆಕೆಯ ಸ್ಥಿತಿ ಗಂಭೀರವಾಗಿದ್ದು, ಲಖನೌ ಆಸ್ಪತ್ರೆಗೆ ಕೊಂಡೊಯ್ಯುವಂತೆ ಡಾಕ್ಟರ್ ನೀಡಿದರು. ಆದರೆ, ಬಲರಾಮಪುರದಲ್ಲಿಯೇ ಆಕೆ ಸಾವನ್ನಪ್ಪಿದ್ದಾಗಿ ತಾಯಿ ತಿಳಿಸಿದರು.

ಮೃತದೇಹವನ್ನು ಪೊಲೀಸರು ಕುಟುಂಬಕ್ಕೆ ಹಸ್ತಾಂತರಿಸಿದ ಬಳಿಕ ಬುಧವಾರ ಅಂತ್ಯಕ್ರಿಯೆ ನಡೆಸಲಾಗಿದೆ. ಈ ಪ್ರಕರಣ ಸಂಬಂಧ ಯೋಗಿ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ದಾಳಿ ನಡೆಸಿದ್ದು, ಕ್ಷಿಪ್ರಗತಿಯಲ್ಲಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಬಿಎಸ್ ಪಿ ವರಿಷ್ಠೆ ಮಾಯಾವತಿ ತೀವ್ರವಾಗಿ ಯೋಗಿ ಆದಿತ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ರಾಷ್ಟ್ರೀಯ ಮಹಿಳಾ ಆಯೋಗದ ವಿರುದ್ಧ ದಾಳಿ ನಡೆಸಿರುವ ಸೋನಿಯಾಗಾಂಧಿ, ರಾಜ್ಯಸರ್ಕಾರದಿಂದ ವರದಿ ಪಡೆದು ಸಿಬಿಐ ತನಿಖೆಗೆ ನಡೆಸಲು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English