ಕೊರೋನ ಸೋಂಕು : ದಕ್ಷಿಣ ಕನ್ನಡ – 322, ಸಾವು 12, ಕಾಸರಗೋಡು – 476

12:54 AM, Saturday, October 3rd, 2020
Share
1 Star2 Stars3 Stars4 Stars5 Stars
(No Ratings Yet)
Loading...

corona ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಶುಕ್ರವಾರ ಹೊಸದಾಗಿ 322 ಮಂದಿಗೆ ಕೊರೋನ ಸೋಂಕು ತಗುಲಿದೆ. ಸೋಂಕಿನಿಂದಾಗಿ ಮತ್ತೆ 12 ಮಂದಿ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆ 23,761ಕ್ಕೆ ಏರಿಕೆ ಕಂಡಿದೆ. ಮೃತಪಟ್ಟವರ ಸಂಖ್ಯೆ ಇದೀಗ 557ಕ್ಕೆ ತಲುಪಿದ್ದು ಜಿಲ್ಲೆಯ ವಿವಿಧ ಆಸ್ಪತ್ರೆಗಳು, ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 277 ಮಂದಿಗೆ ಕೊರೋನ ಮುಕ್ತರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕು ಮುಕ್ತರಾದವರ ಸಂಖ್ಯೆ 17,365ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ 5,839 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 1,66,456 ಸ್ಯಾಂಪಲ್‌ಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 1,42,695 ಮಂದಿಯ ವರದಿಯು ನೆಗೆಟಿವ್ ಬಂದಿದ್ದು, ಉಳಿದ 23,761 ಮಂದಿಯ ವರದಿ ಪಾಸಿಟಿವ್‌ಆಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 476 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 11,734ಕ್ಕೆ ಏರಿಕೆಯಾಗಿದೆ.

ಶುಕ್ರವಾರ ಕೊರೊನಾ ದೃಢಪಟ್ಟ 476 ಮಂದಿಯಲ್ಲಿ 457 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗುಲಿದೆ. ಈ ಪೈಕಿ 13 ಮಂದಿ ಹೊರರಾಜ್ಯ , 6 ಮಂದಿ ವಿದೇಶಗಳಿಂದ ಬಂದವರಾಗಿದ್ದು, ಆರು ಆರೋಗ್ಯ ಸಿಬ್ಬಂದಿಗಳಿಗೆ ಸೋಂಕು ತಗುಲಿದೆ.

ಈ ನಡುವೆ ಜಿಲ್ಲೆಯಲ್ಲಿ165 ಮಂದಿ ಗುಣಮುಖರಾಗಿದ್ದಾರೆ. ಸದ್ಯ 3225 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 1751 ಮಂದಿ ತಮ್ಮ ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 4486 ಮಂದಿ ನಿಗಾದಲ್ಲಿದ್ದು, 3300 ಮಂದಿ ಮನೆ ಹಾಗೂ 1186 ಮಂದಿ ಐಸೋಲೇಷನ್ ವಾರ್ಡ್‌ನಲ್ಲಿದ್ದಾರೆ

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English