ಪುತ್ತೂರು : ಶಾಸಕ ಅಶೋಕ ರೈ ನೇತೃತ್ವದಲ್ಲಿ ಪುತ್ತೂರಿನ ಕೊಂಬೆಟ್ಟು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ದೀಪಾವಳಿ ಪ್ರಯುಕ್ತ ವಸ್ತ್ರ ವಿತರಣೆಯ ‘ಅಶೋಕ ಜನಮನ – 2025’ ಕಾರ್ಯಕ್ರಮದಲ್ಲಿ ಭಾರೀ ಜನಸಂದಣಿಯ ಪರಿಣಾಮವಾಗಿ ನೂಕುನುಗ್ಗಲು ಸಂಭವಿಸಿದ್ದು, ಅನೇಕ ಮಂದಿ ಅಸ್ವಸ್ಥಗೊಂಡಿದ್ದಾರೆ.
ರೈ ಎಸ್ಟೇಟ್ ಎಜುಕೇಶನ್ ಮತ್ತು ಚ್ಯಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿವರ್ಷದಂತೆ ಈ ಬಾರಿಯೂ 13ನೇ ವರ್ಷದ ಜನಮನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ, ನಿರೀಕ್ಷೆಗೂ ಮೀರಿದ ಜನರು ಒಂದೇ ಬಾರಿಗೆ ಜಮಾಯಿಸಿದ ಕಾರಣ ನೂಕುನುಗ್ಗಲು ಉಂಟಾಗಿದೆ.
ಸ್ಥಳದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿದ್ದು, ಇದರಿಂದ ಉಸಿರಾಟದ ತೊಂದರೆ ಮತ್ತು ಸುಸ್ತು ಎದುರಿಸಿದ ಕೆಲವು ಅಸ್ವಸ್ಥರನ್ನು ಕೂಡಲೇ ಪುತ್ತೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಆಯೋಜಕರು ಸಾಮರ್ಥ್ಯಕ್ಕಿಂತ ಅಧಿಕ ಜನರನ್ನು ನಿಭಾಯಿಸಲು ವಿಫಲರಾದದ್ದು ಈ ಘಟನೆಗೆ ಕಾರಣ ಎನ್ನಲಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









