ವಿಶೇಷ ಮಹಿಳಾ ತಹಶೀಲ್ದಾರ್ 5 ಲಕ್ಷ ರೂಪಾಯಿ ಲಂಚವನ್ನು ಸ್ವೀಕರಿಸುತ್ತಿದ್ದಾಗ ಎಸಿಬಿ ಬಲೆಗೆ

9:33 PM, Tuesday, October 6th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Tahashidar Lakshmiಬೆಂಗಳೂರು: ದಕ್ಷಿಣ ತಾಲೂಕಿನ ಕೆಜಿ ರೋಡ್‍ನಲ್ಲಿರುವ ತಹಶೀಲ್ದಾರ್ ಕಚೇರಿ ವಿಶೇಷ ಮಹಿಳಾ ತಹಶೀಲ್ದಾರ್ ಲಕ್ಷ್ಮೀ ಮತ್ತು ಕ್ಲರ್ಕ್ ಪ್ರಸನ್ನಕುಮಾರ್ ಎಸಿಬಿ ಬಲೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಸುಮಾರು 5 ಲಕ್ಷ ರೂಪಾಯಿ ಲಂಚವನ್ನು ಸ್ವೀಕರಿಸುತ್ತಿದ್ದಾಗ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಜಮೀನಿನ ಆರ್ಟಿಸಿ ಮಾಡಿಕೊಡುವುದಕ್ಕೆ ಅಧಿಕಾರಿಗಳು 7 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ.  ಇದರಲ್ಲಿ 5 ಲಕ್ಷ ತಹಶೀಲ್ದಾರ್ ಲಕ್ಷ್ಮೀಗೆ ಹಾಗೂ ಉಳಿದ ಎರಡು ಲಕ್ಷ ಕ್ಲರ್ಕ್ ಪ್ರಸನ್ನಕುಮಾರಿಗೆ ಎಂದು ಹಂಚಿಕೊಂಡಿದ್ದಾರೆ ಎನ್ನಲಾಗಿದೆ.

ಎಸಿಬಿ  ಡಿವೈ ಎಸ್ಪಿ ತಮ್ಮಣ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಬೇಗೂರಿನ ಆಜಂ ಪಾಷಾರಿಂದ 7 ಲಕ್ಷದ ಪೈಕಿ 5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಗಳು  ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
Tahashidar Lakshmi

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English