ಪ್ರೊ.ಅಮೃತ ಸೋಮೇಶ್ವರ ಅವರಿಗೆ 2020ರ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿ

12:05 PM, Wednesday, October 7th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Amrutha Somehwaraಮಂಗಳೂರು  : ಹಿರಿಯ ಸಾಹಿತಿ, ಜನಪದ ವಿದ್ವಾಂಸ, ನಿವೃತ್ತ ಪ್ರಾಧ್ಯಾಪಕ ಪ್ರೊ.ಅಮೃತ ಸೋಮೇಶ್ವರ ಅವರಿಗೆ 2020ರ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿ ಘೋಷಿಸಲಾಗಿದೆ.

ಪುತ್ತೂರು ಸಹಾಯಕ ಆಯುಕ್ತ ಯತೀಶ್‌ ಉಳ್ಳಾಲ್‌ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.  ಅ.10ರಂದು ಇಲ್ಲಿನ ಬಾಲವನದಲ್ಲಿ ನಡೆಯಲಿರುವ ಡಾ. ಕಾರಂತರ ಜನ್ಮ ದಿನಾಚರಣೆ ಕಾರ‍್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.  ಅಪರಾಹ್ನ 2.30ಕ್ಕೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ಕೊರೊನಾ ನಿಯಮಾವಳಿ ಹಿನ್ನೆಲೆಯಲ್ಲಿ ಈ ಬಾರಿ ಜನ್ಮದಿನಾಚರಣೆ ಸರಳವಾಗಿ ನಡೆಯಲಿದೆ.

ಪ್ರೊ.ಅಮೃತ ಸೋಮೇಶ್ವರ ಖ್ಯಾತ ವಿದ್ವಾಂಸರಾಗಿದ್ದು, ಕನ್ನಡ ತುಳು ಸಾಹಿತ್ಯ ಕ್ಷೇತ್ರಗಳಿಗೆ ಸಾಕಷ್ಟು ಕೊಡುಗೆಯನ್ನು ನೀಡಿದ್ದಾರೆ. ಹಲವಾರು ಯಕ್ಷಗಾನ ಪ್ರಸಂಗಗಳನ್ನು ರಚಿಸಿರುವ ಇವರು ಅಪಾರ ಶಿಷ್ಯಬಳಗವನ್ನು ಹೊಂದಿದ್ದಾರೆ. ಇದೀಗ ಅಮೃತ ಸೋಮೇಶ್ವರರಿಗೆ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿ ಘೋಷಣೆಯಾಗಿರೋದು ಅವರ ಅಭಿಮಾನಿಗಳಲ್ಲಿ ಅಪಾರ ಸಂತೋಷವನ್ನುಂಟು ಮಾಡಿದೆ.

ಅ.10ರಂದು ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶಾಸಕ ಸಂಜೀವ ಮಠಂದೂರು, ಸಂಸದ ನಳಿನ್‌ ಕುಮಾರ್‌ ಕಟೀಲ್‌, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಾಲವನದ ವಿಶೇಷ ಕರ್ತವ್ಯಾಧಿಕಾರಿ ಸುಂದರ ಕೇನಾಜೆ ಉಪಸ್ಥಿತರಿದ್ದರು.

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English