ಮುಖ್ಯಮಂತ್ರಿಯಾಗ ಬೇಕು ಎಂದು ಗೆಳೆಯರಲ್ಲಿ ಹೇಳಿಕೊಂಡಿದ್ದ ಯುವಕ, ಆತ್ಮಹತ್ಯೆಗೆ ಶರಣು

2:18 PM, Thursday, October 8th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Youth Hangsಬೆಂಗಳೂರು : ಮುಖ್ಯಮಂತ್ರಿಯಾಗ ಬೇಕು ಎಂದು ಗೆಳೆಯರಲ್ಲಿ ಹೇಳಿಕೊಂಡಿದ್ದ ಯುವಕನೊರ್ವ ಕನಸು ಈಡೇರುವುದಿಲ್ಲ ಎಂದು ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಜಯನಗರದ 4ನೇ ಹಂತದಲ್ಲಿ ಬುಧವಾರ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಶಶಾಂಕ್‌ (22) ಮೃತ ದುರ್ದೈವಿ.

ತನ್ನ ಬಾಡಿಗೆ ಕೊಠಡಿಯಲ್ಲಿ ಬೆಳಗ್ಗೆ ಶಶಾಂಕ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೆಲ ಹೊತ್ತಿನ ಬಳಿಕ ಆತನ ಸ್ನೇಹಿತರು ಕೊಠಡಿಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಂದೂವರೆ ತಿಂಗಳ ಹಿಂದೆ ತನ್ನೂರಿನಿಂದ ಉದ್ಯೋಗ ಅರಸಿ ನಗರಕ್ಕೆ ಬಂದಿದ್ದ ಶಶಾಂಕ್‌ ಬಿಕಾಂ ಪದವಿ ವ್ಯಾಸಂಗ ಮುಗಿಸಿದ್ದ. ಜಯನಗರದ 4ನೇ ಹಂತದಲ್ಲಿ ಸ್ನೇಹಿತರ ಜತೆ ಬಾಡಿಗೆ ಕೊಠಡಿಯಲ್ಲಿ ನೆಲೆಸಿದ್ದ ಆತ, ಕೆಲಸಕ್ಕೆ ಹಲವು ಕಡೆ ಅಲೆದಾಡಿದ್ದ. ಆದರೆ ಎಲ್ಲೂ ಸಹ ಉದ್ಯೋಗ ಸಿಗದಿದ್ದರಿಂದ ಜಿಗುಪ್ಸೆಗೊಂಡಿದ್ದ.

‘ನಾನು ಮುಖ್ಯಮಂತ್ರಿಯಾಗುವ ಗುರಿ ಹೊಂದಿದ್ದೇನೆ. ಆದರೆ ನನ್ನ ಕನಸುಗಳು ಈಡೇರುವುದಿಲ್ಲವೆಂದು ಗೆಳೆಯರ ಜತೆ ಶಶಾಂಕ್‌ ಹೇಳಿಕೊಂಡಿದ್ದ ’ ಎಂದು ಪೊಲೀಸರು ಹೇಳಿದ್ದಾರೆ.

ಬೆಳಗ್ಗೆ 7 ಗಂಟೆ ಸುಮಾರಿಗೆ ಆತನ ಗೆಳೆಯರು ಕೆಲಸಕ್ಕೆ ತೆರಳಿದ್ದಾರೆ. ಆಗ ಏಕಾಂಗಿಯಾಗಿದ್ದ ಶಶಾಂಕ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೆಲ ಹೊತ್ತಿನ ನಂತರ ಶಶಾಂಕ್‌ ಮೊಬೈಲ್‌ಗೆ ಗೆಳೆಯರು ನಿರಂತರವಾಗಿ ಕರೆ ಮಾಡಿದ್ದಾರೆ. ಆದರೆ ಕರೆ ಸ್ವೀಕರಿಸದ ಕಾರಣಕ್ಕೆ ಆತಂಕಗೊಂಡ ಅವರು, ಕೂಡಲೇ ಕೊಠಡಿಗೆ ಬಂದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆದರೆ ಯಾವುದೇ ಮರಣಪತ್ರ ಸಿಕ್ಕಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English