ಉಡುಪಿ : ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಗಿಂತಲೂ ಪುರುಷತ್ವ ಹರಣ ಶಿಕ್ಷೆ ವಿಧಿಸುವುದು ಸೂಕ್ತ, ಅತ್ಯಾಚಾರ ಪ್ರಕರಣಗಳಿಗೆ ಧರ್ಮ, ಜಾತಿಯ ಲೇಪನ ಹಚ್ಚುವುದು ಸರಿಯಲ್ಲ. ಇದು ಮಾನಸಿಕ ಸ್ಥಿತಿಯ ಮೇಲೆ ಅವಲಂಭಿತವಾಗಿರುತ್ತದೆ ಎಂದು ಉಡುಪಿ, ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಹಲವು ಕಡೆಗಳಲ್ಲಿ ಪದೇ ಪದೇ ಅತ್ಯಾಚಾರ ಪ್ರಕರಣಗಳು ನಡೆಯುತ್ತಲೇ ಇವೆ. ಇದೇ ಸಂದರ್ಭದಲ್ಲಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಬಗ್ಗೆಯೂ ಎಲ್ಲ ಕಡೆಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಅತ್ಯಾಚಾರಿಗೆ ಗಲ್ಲು ಶಿಕ್ಷೆಗಿಂತಲೂ ಪುರುಷತ್ವ ಹರಣ ಶಿಕ್ಷೆ ವಿಧಿಸುವ ಕುರಿತು ಕಾನೂನು ತಿದ್ದುಪಡಿಗೆ ಕೇಂದ್ರ ಸರಕಾರವನ್ನು ಒತ್ತಾಯಿಸ ಲಾಗುವುದು ಎಂದರು.
ಹತ್ರಸ್ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸರಕಾರ ಮತ್ತು ಉತ್ತರ ಪ್ರದೇಶ ರಾಜ್ಯದ ಆದಿತ್ಯನಾಥ್ ಸರಕಾರಕ್ಕೆ ಕೆಟ್ಟ ಹೆಸರು ತರಲು ಸಂಚು ನಡೆಸ ಲಾಗುತ್ತಿದೆ. ಈ ಪ್ರಕರಣದ ಹಿಂದೆ ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆ ಗಳ ಕೈವಾಡ ಇರುವುದು ತಿಳಿದುಬಂದಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ಯಾಗಬೇಕು ಎಂದು ಅವರು ಒತ್ತಾಯಿಸಿದರು.
Click this button or press Ctrl+G to toggle between Kannada and English