ಹುಟ್ಟುಹಬ್ಬದ ಪಾರ್ಟಿಗೆಂದು ಕರೆಸಿ 23 ವರ್ಷದ ಯುವತಿಯನ್ನು ಅತ್ಯಾಚಾರ ಗೈದ ಕಾಮುಕರು

1:41 PM, Sunday, October 11th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Rape Accucedಲಕ್ನೋ: ಹುಟ್ಟುಹಬ್ಬದ ಪಾರ್ಟಿಗೆಂದು ಕರೆದು 23 ವರ್ಷದ ಯುವತಿಯ ಮೇಲೆ ಇಬ್ಬರು ಕಾಮುಕರು ಬಾರ್ರಾದ ಸಚನ್ ಸ್ಕ್ವೇರ್‌ನಲ್ಲಿರುವ ಹೋಟೆಲ್‌ನಲ್ಲಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಕಾನ್ಪುರದಲ್ಲಿ ನಡೆದಿದೆ.

ಸಂತ್ರಸ್ತೆ ಕಲ್ಯಾಣ್ಪುರದ ನಿವಾಸಿ ಯುವತಿ ದೆಹಲಿಯ ಆರೋಗ್ಯಕೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ತಾಯಿಯ ಅನಾರೋಗ್ಯದಿಂದಾಗಿ ಒಂದು ವರ್ಷದ ಹಿಂದೆ ಕೆಲಸ ಬಿಟ್ಟು ಮನೆಯಲ್ಲಿದ್ದರು.

ಸಂತ್ರಸ್ತೆಯ ನೆರೆಹೊರೆಯ ಮೋನಿಕಾ ಎನ್ನುವ  ಹುಡುಗಿಯೊಬ್ಬಳು ತನ್ನ ಸಹೋದರ ಅಶಿಶ್ ಹುಟ್ಟುಹಬ್ಬದ ಪಾರ್ಟಿಗೆ ಕರೆದಿದ್ದಳು. ಆಕೆಯ ತಂದೆ ಇನ್ಸ್‌ಪೆಕ್ಟರ್ ಆಗಿದ್ದರು. ನಂತರ ಸಂತ್ರಸ್ತೆ ಪಾರ್ಟಿಗೆಂದು ಸಚನ್ ಚೌರಾಹಾದ ಸೋನಾ ಮ್ಯಾನ್ಷನ್ ಹೋಟೆಲ್ ರೂಮಿಗೆ ಹೋಗಿದ್ದಾಳೆ. ಅಲ್ಲಿ ಆಶಿಶ್ ತನ್ನ ಸ್ನೇಹಿತ ಅಭಿಷೇಕ್ ಜೊತೆ ರೂಮಿನಲ್ಲಿದ್ದನು. ಇವರಿಬ್ಬರು ಸ್ವಲ್ಪ ಸಮಯದವರೆಗೆ ಸಂತ್ರಸ್ತೆ ಜೊತೆ ಮಾತನಾಡಿದ್ದಾರೆ. ನಂತರ ಆಕೆಗೆ ನಿದ್ದೆ ಬರುವ ಔಷಧಿ ಮಿಕ್ಸ್ ಮಾಡಿ, ಕುಡಿಯಲು ಜ್ಯೂಸ್ ಕೊಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಪೈಕಿ ಸುಖ್ಬೀರ್ ಸಿಂಗ್  ಎನ್ನುವವರ ಮಗ ಆಶಿಶ್ ಕುಮಾರ್ ಸಿಂಗ್  ಮತ್ತು  ಸಂಜಯ್ ದುಬೆ ಎನ್ನುವವರ ಮಗ ಅಭಿಷೇಕ್ ಕುಮಾರ್ ದುಬೆ  ಅವರನ್ನು ಗುರುವಾರ ಬೆಳಿಗ್ಗೆ 8: 30 ರ ಸುಮಾರಿಗೆ ಬಾರ್ರಾ ಬೈಪಾಸ್ ಬಳಿ ಬಂಧಿಸಲಾಗಿದೆ.

ಆದರೆ ಸಂತ್ರಸ್ತೆಯನ್ನು ತನ್ನ ಕುಟುಂಬದವರು ಮನೆಗೆ ಸೇರಿಸದ ಕಾರಣ ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದಳು. ಅಷ್ಟರಲ್ಲಿ ಆಕೆಯ ಸ್ನೇಹಿತ ಬಂದು ಕಾಪಾಡಿದ್ದಾನೆ.

ಸಂತ್ರಸ್ತೆ ಪಾನೀಯವನ್ನು ಕುಡಿದ ತಕ್ಷಣ ಪ್ರಜ್ಞೆ ಕಳೆದುಕೊಂಡಿದ್ದು, ಈ ವೇಳೆ ಇಬ್ಬರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಬಳಿಕ ಸಂತ್ರಸ್ತೆ ಎಚ್ಚರಗೊಂಡು ಅತ್ಯಾಚಾರಕ್ಕೊಳಗಾಗಿರುವ ಬಗ್ಗೆ ತಿಳಿದುಕೊಂಡಿದ್ದಾಳೆ. ಘಟನೆಯ ನಂತರ ಸಂತ್ರಸ್ತೆ ತನ್ನ ಮನೆಗೆ ಹೋಗಿದ್ದಾಳೆ. ಆದರೆ ಆಕೆಯ ಕುಟುಂಬದವರು ಅವಳಿಗೆ ಬೈದು, ಮನೆಯೊಳಗೆ ಬರಬಾರದೆಂದು ಹೇಳಿದ್ದಾರೆ. ಇದರಿಂದ ಬೇಸರಗೊಂಡ ಸಂತ್ರಸ್ತೆ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದಳು.

ಅದರಂತೆಯೇ ಸಮೀಪದ ರೈಲ್ವೆ ನಿಲ್ದಾಣಕ್ಕೆ ಸಂತ್ರಸ್ತೆ ಹೋಗಿದ್ದಾಳೆ. ಅಷ್ಟರಲ್ಲಿ ಸಂತ್ರಸ್ತೆ ಸ್ನೇಹಿತರೊಬ್ಬರು ನಡೆದ ಘಟನೆ ಬಗ್ಗೆ ತಿಳಿದುಕೊಂಡು ಕೂಡಲೇ ಸ್ಥಳಕ್ಕೆ ಧಾವಿಸಿ ಸಂತ್ರಸ್ತೆಯನ್ನು ಕಾಪಾಡಿದ್ದಾರೆ. ನಂತರ ಇಬ್ಬರು ಬಾರ್ರಾ ಪೊಲೀಸ್ ಠಾಣೆಗೆ ಬಂದು ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳನ್ನು ಬಳಸಿಕೊಂಡು ಆರೋಪಿಗಳಾದ ಆಶಿಶ್ ಮತ್ತು ಆತನ ಸ್ನೇಹಿತ ಅಭಿಷೇಕ್ ಇಬ್ಬರನ್ನು ಬಂಧಿಸಲಾಗಿದೆ. ಸದ್ಯಕ್ಕೆ ಸಂತ್ರಸ್ತೆ ಹೇಳಿಕೆಯ ನಂತರ ಹುಟ್ಟುಹಬ್ಬದ ಪಾರ್ಟಿ ಇದೆ ಎಂದು ಆಮಿಷವೊಡ್ಡಿದ್ದ ಹುಡುಗಿಯ ವಿರುದ್ಧ ದೂರು ದಾಖಲಿಸಿಕೊಂಡು ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ‘ಎಂದು ಇನ್ಸ್‌ಪೆಕ್ಟರ್ ಹರ್ಮೀತ್ ಸಿಂಗ್ ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English