- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕೊರೊನಾ ಪ್ರಕರಣ : ದ.ಕ.ಜಿಲ್ಲೆ – 265 ಸಾವು 5

corona [1]ಮಂಗಳೂರು: ದ.ಕ.ಜಿಲ್ಲೆಯಲ್ಲಿ ಭಾನುವಾರ 265 ಜನರಲ್ಲಿ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 26 ಸಾವಿರ ಗಡಿ ದಾಟಿದೆ.

ಭಾನುವಾರ  ಪತ್ತೆಯಾಗಿರುವ ಕೊರೊನಾ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತ ಪ್ರಕರಣ ಸಂಖ್ಯೆ 26,529 ಕ್ಕೆ ಏರಿಕೆಯಾಗಿದೆ.

ಕೊರೊನಾಗೆ ಭಾನುವಾರ  ಐವರು ಬಲಿಯಾಗಿದ್ದು, ಇದುವರೆಗೆ ಸೋಂಕಿಗೆ 605 ಜನರು ಸಾವನ್ನಪ್ಪಿದ್ದಾರೆ. ಇನ್ನು ಜಿಲ್ಲೆಯಲ್ಲಿ 4,180 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 283 ಮಂದಿ ಗುುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಒಟ್ಟು 21,744 ಜನರು ಗುಣಮುಖರಾದಂತಾಗಿದೆ

:ಜಿಲ್ಲೆಯಲ್ಲಿ ಈವರೆಗೆ 1,97,582 ಮಂದಿಯ ಗಂಟಲು ದ್ರವ ಮಾದರಿಯನ್ನು ತಪಾಸಣೆ ಮಾಡಲಾಗಿದ್ದು, ಅದರಲ್ಲಿ 1,71,053 ಮಂದಿಯಲ್ಲಿ ನೆಗೆಟಿವ್ ಬಂದಿದೆ.