- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕಾರಿಂಜೇಶ್ವರ ದೇವಸ್ಥಾನದ ಎಡ ಪಾರ್ಶ್ವದ ಕಲ್ಲಿನ ತಡೆಗೋಡೆ ಕುಸಿದು ಹಾನಿ

Karinje [1]ಮಂಗಳೂರು : ಧಾರಾಕಾರ ಸುರಿದ ಮಳೆಗೆ ಭೂ ಕೈಲಾಸ ಪ್ರತೀತಿಯ ಬಂಟ್ವಾಳ ತಾಲೂಕಿನ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ತಡೆಗೋಡೆ ಕುಸಿದು ಬಿದ್ದಿದೆ.

ಈಶ್ವರ (ಶ್ರೀ ಕಾರಿಂಜೇಶ್ವರ) ದೇವಸ್ಥಾನದ ಎಡ ಪಾರ್ಶ್ವದ ಬದಿಗೆ ಕಟ್ಟಿದ್ದ ಕಲ್ಲಿನ ತಡೆಗೋಡೆ ಕುಸಿದು ಬಿದ್ದಿದ್ದು, ಬುಧವಾರ ಬೆಳಗ್ಗೆ ಸಿಬ್ಬಂದಿಗಳ ಗಮನಕ್ಕೆ ಬಂದಿದೆ.ಈ ಅಂಗಣವನ್ನು ವಾನರಗಳಿಗೆ ನೈವೇದ್ಯ ಹಾಕಲು ಬಳಸಲಾಗುತ್ತಿದ್ದು, ಅಂಗಣದ ಇಂಟರ್ ಲಾಕ್ ಕಿತ್ತುಹೋಗಿದೆ.

ದೇವಸ್ಥಾನ ಬೃಹತ್ ಬಂಡೆಯ ಮೇಲೆ ಸ್ಥಾಪಿತಗೊಂಡಿದ್ದು, ನಾಲ್ಕು ಯುಗಗಳ ಪುರಾಣ ಇತಿಹಾಸ ಹೊಂದಿದೆ. ಕುಸಿದ ಭಾಗದ ಕೆಳಭಾಗದಲ್ಲಿ ಕಲ್ಲು, ಮಣ್ಣಿನ ದಿಬ್ಬವಿದ್ದು, ದೇವಸ್ಥಾನಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಆಡಳಿತಾಧಿಕಾರಿ ನೋಣಯ್ಯ ನಾಯ್ಕ್ ಅವರು ತಿಳಿಸಿದ್ದಾರೆ. ತಜ್ಞರ ಪರಿಶೀಲನೆ ಬಳಿಕ ಪರಿಹಾರೋಪಾಯ ನಡೆಸಬೇಕಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.