ಕೋಳಿ ಫಾರಂನಲ್ಲಿ ಕೂಡಿಹಾಕಿ 17 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ

7:43 PM, Thursday, October 15th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Rape
ಕಟಕ್ : ಮನೆಯಿಂದ ಓಡಿಹೋಗಿದ್ದ 17 ವರ್ಷದ ಬಾಲಕಿಯನ್ನು ಕೋಳಿ ಫಾರಂನಲ್ಲಿ ಕೂಡಿಹಾಕಿ 22 ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಒಡಿಶಾದಲ್ಲಿ ನಡೆದಿದೆ.

ಕಟಕ್ ನಲ್ಲಿ ಕೋಳಿ ಸಾಕಣೆ ಕೇಂದ್ರಕ್ಕೆ ಹುಡುಗಿಯನ್ನು ಕರೆದೊಯ್ದು ಕೂಡಿಹಾಕಿ ಅತ್ಯಾಚಾರ ಎಸಗಲಾಗಿದೆ. ಜಗತ್ ಸಿಂಗ್ ಪುರ್ ಜಿಲ್ಲೆಯ ಟಿರ್ಟಾಲ್ ನಿವಾಸಿಯಾಗಿರುವ ಹುಡುಗಿ ಪೋಷಕರೊಂದಿಗೆ ಜಗಳವಾಡಿ ಮನೆಯಿಂದ ಓಡಿ ಹೋಗಿದ್ದಾಳೆ. ಓಎಂಸಿ ಸ್ಕ್ವೇರ್ ನಲ್ಲಿರುವ ಬಸ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬ ಆಕೆಯನ್ನು ಮನೆಗೆ ಕರೆದುಕೊಂಡು ಹೋಗುವುದಾಗಿ ಭರವಸೆ ನೀಡಿದ್ದಾನೆ.

ಆದರೆ ಟಿರ್ಟಾಲ್ ಗೆ ಹೋಗುವ ಬದಲು ಚೌಲಿಯಾಗಂಜ್ ಪೊಲೀಸ್ ಠಾಣೆ ಪ್ರದೇಶದ ಗತಿರೌಟ್ ಪಾಟ್ನಾ ಗ್ರಾಮದಲ್ಲಿರುವ ಕೋಳಿ ಸಾಕಾಣಿಕೆ ಕೇಂದ್ರಕ್ಕೆ ಕರೆದೊಯ್ದು ಬಲವಂತವಾಗಿ 22 ದಿನ ಕೂಡಿ ಹಾಕಿದ್ದಾರೆ. ಆತನ ಗೆಳೆಯನನ್ನು ಕರೆದುಕೊಂಡು ಬಂದು ಪದೇಪದೇ ಅತ್ಯಾಚಾರ ಎಸಗಿದ್ದಾರೆ.

ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ದಿಢೀರ್ ದಾಳಿ ನಡೆಸಿ ಹುಡುಗಿಯನ್ನು ರಕ್ಷಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದ್ದು ಪರಾರಿಯಾಗಿರುವ ಮತ್ತೊಬ್ಬನ ಬಂಧನಕ್ಕೆ ಬಲೆ ಬೀಸಲಾಗಿದೆ. ಬಾಲಕಿಯನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿ ಅನಾಥಾಶ್ರಮಕ್ಕೆ ಕಳುಹಿಸಲಾಗಿದೆ. ಘಟನೆ ರಾಜಕೀಯ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದ್ದು ಪ್ರತಿಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಆಡಳಿತರೂಢ ಬಿಜೆಡಿ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿವೆ.

ಆರೋಪಿಗಳನ್ನು ಸಂತೋಷ್ ಬೆಹೆರಾ ಮತ್ತು ರಾಕೇಶ್ ರೂಟ್ ಎಂದು ಗುರುತಿಸಲಾಗಿದೆ.  ಸಾಮೂಹಿಕ ಅತ್ಯಾಚಾರ ಎಸಗಿದ  ಆರೋಪದಲ್ಲಿ  ಅವರನ್ನು  ಒಡಿಶಾ ಪೊಲೀಸರು ಬಂಧಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English