ಶಿಕ್ಷಕಿ ಕೊರೋನಾ ಚಿಕಿತ್ಸೆಗೆ ಸ್ಪಂದಿಸಿದ ಸಿಎಂ ಹಾಗೂ ಶಿಕ್ಷಣ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಅಭಯಚಂದ್ರ ಜೈನ್

10:12 PM, Thursday, October 15th, 2020
Share
1 Star2 Stars3 Stars4 Stars5 Stars
(No Ratings Yet)
Loading...

Abhayachandra Jain ಮಂಗಳೂರು : ದೇಶ ಕೊರೊನದಿಂದ ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದರೂ  ಪ್ರಧಾನಿ ಮೋದಿಯವರು 8 ಸಾವಿರ ಕೋಟಿ ರೂ.ಯ ವಿಮಾನ ಖರೀದಿಸಿದ್ದಾರೆ. ಕೊರೊನಾ ಸಂಕಷ್ಟದ ಕಾಲದಲ್ಲಿಯೂ ಈ ರೀತಿಯ ಖರೀದಿ ಎಷ್ಟು ಸಮಂಜಸ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಪ್ರಶ್ನಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಕೊರೊನಾದಲ್ಲಿ ಬಳಲುತ್ತಿರುವ ಜನತೆಗೆ ಸಂತಾಪ ಹಾಗೂ ಅವರ ಆಸ್ಪತ್ರೆಗಳ ಖರ್ಚು-ವೆಚ್ಚಗಳನ್ನು‌ ಸರ್ಕಾರ ಭರಿಸಿ, ಸಾಂತ್ವನ ಹೇಳಬೇಕಾಗಿರುವ ಕಾರ್ಯ ಈಗ ಆಗಬೇಕಾಗಿದೆ ಎಂದು ಹೇಳಿದರು.

ಸಾವಿರಾರು ಸಂಖ್ಯೆಯಲ್ಲಿ ಶಿಕ್ಷಕರು ತಮ್ಮ ಜೀವವನ್ನು ಪಣಕ್ಕಿಟ್ಟು ಸೇವೆ ಸಲ್ಲಿಸಿ ಸಂಕಷ್ಟದಲ್ಲಿದ್ದಾರೆ.ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ .ಅವರ ರಕ್ಷಣೆಗೆ ಸರಕಾರ ಧಾವಿಸಬೇಕು ಕೋರೊನಾದಿಂದಾಗಿ ಆಸ್ಪತ್ರೆಗಳಲ್ಲಿ ಬಿಲ್ ಕಟ್ಟಲಾಗದೆ  ತೊಳಲಾಗುತ್ತಿದ್ದಾರೆ ಅವರಿಗೆ ಸಹಕಾರ ನೀಡಬೇಕು ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಒತ್ತಾಯಿಸಿದರು..

ನಮ್ಮ ಮೂಡುಬಿದಿರೆಯ ಶಿಕ್ಷಕಿಗೂ ಇದೇ ರೀತಿ ಕೊರೊನಾ ಸೋಂಕು ತಗುಲಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಎರಡು ದಿನಗಳ ಹಿಂದೆ ಅವರ ಪುತ್ರಿ ತಾಯಿಗೆ ಚಿಕಿತ್ಸೆ ಕೊಡಿಸುತ್ತಿರುವ ಸಂಕಷ್ಟದ ಬಗ್ಗೆ ಸಿಎಂ ಹಾಗೂ ಜನಪ್ರತಿನಿಧಿಗಳಲ್ಲಿ ಅಳಲು ತೋಡಿಕೊಂಡಿದ್ದರು. ತಕ್ಷಣ ಇದಕ್ಕೆ ಸಿಎಂ ಯಡಿಯೂರಪ್ಪ ಹಾಗೂ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸ್ಪಂದಿಸಿದ್ದು, ಅದಕ್ಕಾಗಿ ಅವರಿಬ್ಬರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ವಿದ್ಯಾಗಮ‌ ಯೋಜನೆಯ ಮೂಲಕ ರಾಜ್ಯದ ಶಿಕ್ಷಕರು ಮನೆ ಮನೆಗೆ ತೆರಳಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಕಾರ್ಯದಲ್ಲಿ ತೊಡಗಿದ್ದಾರೆ. ಪರಿಣಾಮ ಸಾಕಷ್ಟು ಶಿಕ್ಷಕರಿಗೆ ಕೊರೊನಾ ಸೋಂಕು ತಗುಲಿದ್ದು, ಕೆಲವರು ಸೋಂಕಿಗೆ ಬಲಿಯಾಗಿದ್ದಾರೆ‌.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English