ಮಗಳ ಪ್ರಯತ್ನಕ್ಕೆ ಸರ್ಕಾರ ಸ್ಪಂದಿಸಿ ದರೂ, ಕೊರೋನಾ ಆ ಶಿಕ್ಷಕಿಯ ಪ್ರಾಣವನ್ನೇ ಕಸಿದುಕೊಂಡಿತು

2:02 PM, Friday, October 16th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Padamkshiಮೂಡಬಿದಿರೆ: ವಿವಿಧ ಸ್ಥಳಗಳಿಗೆ ಭೇಟಿ ನೀಡುವ ರಾಜ್ಯ ಸರ್ಕಾರದ ‘ವಿದ್ಯಾಗಮ’ ಯೋಜನೆಯಡಿ ಕರ್ತವ್ಯ ನಿರ್ವಹಿಸುತಿದ್ದ  ಪ್ರೌಢಶಾಲೆಯ  ಶಿಕ್ಷಕಿಯೊಬ್ಬರು  ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಮೂಡಬಿದಿರೆಯ ಜವಾಹರಲಾಲ್ ನೆಹರೂ ಅನುದಾನಿತ ಪ್ರೌಢಶಾಲೆಯ ಶಿಕ್ಷಕಿಯಾಗಿದ್ದ ಪದ್ಮಾಕ್ಷಿ ಎನ್ ಅವರು ವಿವಿಧ ಸ್ಥಳಗಳಿಗೆ ಭೇಟಿ ನೀಡುವ ಮೂಲಕ ‘ವಿದ್ಯಾಗಮ’ ಯೋಜನೆಯಡಿ ವಿದ್ಯಾರ್ಥಿಗಳಿಗೆ ಕಲಿಸುತ್ತಿದ್ದರು. ಅಂತಹ ಭೇಟಿಗಳ ಸಮಯದಲ್ಲಿ ಶಿಕ್ಷಕಿ ಅನಾರೋಗ್ಯಕ್ಕೆ ಒಳಗಾಗಿದ್ದರು. ಸೆಪ್ಟೆಂಬರ್ 29 ರಂದು ಅವರು ಕೋವಿಡ್ ಪಾಸಿಟಿವ್ ವರದಿ ಪಡೆದಿದ್ದರು. ಆಕೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ.

ಪದ್ಮಾಕ್ಷಿಯವರ ಪತಿಗೆ ಸಹ ಕೊರೋನಾ ಸೋಂಕು ತಗುಲಿದೆ. ಅವರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆಯಿಂದ ಅವರೀಗ ಚೇತರಿಸಿಕೊಂಡಿದ್ದಾರೆ.

ಇದೇ ವೇಳೆ ಪದ್ಮಾಕ್ಷಿ ಅವರ ಪುತ್ರಿ ಐಶ್ವರ್ಯಾ ತಮ್ಮ ಕುಟುಂಬಕ್ಕೆ ನೆರವಾಗುವಂತೆ ಮುಖ್ಯಮಂತ್ರಿ, ಮಂತ್ರಿಗಳು, ಶಾಸಕರು, ಸಂಸದರು ಮುಂತಾದವರಲ್ಲಿ ನೆರವನ್ನು ಯಾಚಿಸಿದ್ದರು. ಆ ಮನವಿಗೆ ಸ್ಪಂದಿಸಿದ್ದ ಸರ್ಕಾರ ಶಿಕ್ಷಕಿಯ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಭರವಸೆ ನೀಡಿತ್ತು. ಆದರೂ ಜೀವ ಉಳಿಸಲಾಗಲಿಲ್ಲ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English