ಚಾಮುಂಡೇಶ್ವರಿಗೆ ಪುಷ್ಪಾರ್ಚನೆಗೈಯುವ ಮೂಲಕ ಐತಿಹಾಸಿಕ ಮೈಸೂರು ದಸರಾಗೆ ಚಾಲನೆ

8:41 PM, Saturday, October 17th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Mysuru Dasaraಮೈಸೂರು:   ಖ್ಯಾತ ಹೃದ್ರೋಗ ತಜ್ಞ ಡಾ.ಸಿಎನ್‌ ಮಂಜುನಾಥ್‌ರವರು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆಗೈಯುವ ಮೂಲಕ ವಿದ್ಯುಕ್ತವಾಗಿ ಐತಿಹಾಸಿಕ ಮೈಸೂರು ದಸರಾಗೆ ಚಾಲನೆ ನೀಡಿದ್ದಾರೆ.

ಬೆಳಿಗ್ಗೆ 7:4ರಿಂದ 8:15ರ  ಶುಭ ತುಲಾ ಲಗ್ನದಲ್ಲಿ ಮೈಸೂರು ದಸರಾವನ್ನು ಉದ್ಘಾಟನೆ ಮಾಡಲಾಯಿತು. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವರು ಉದ್ಘಾಟಕರಿಗೆ ಜೊತೆಯಾದರು.

ಈ ಬಾರಿ ಇಡೀ ಜಗತ್ತು ಕೊರೊನಾ ಮಹಾಮಾರಿಯಿಂದ ಸಂಕಷ್ಟಕ್ಕೀಡಾಗಿರುವ ಈ ಸಮಯದಲ್ಲಿ ದಸರಾ ಕೂಡ ಸರಳವಾಗಿ ಆಚರಿಸಲ್ಪಡುತ್ತಿದ್ದು, ಕೊರೊನಾ ವಾರಿಯರ್ಸ್‌ ಅಸಂಖ್ಯಾತ ಜನರ ಪ್ರಾಣ ರಕ್ಷಣೆಗೆ ಹೋರಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಈ ಬಾರಿಯ ದಸರಾದಲ್ಲಿ ಕೊರೊನಾ ವಾರಿಯರ್ಸ್‌ಗಳನ್ನು ಸ್ಮರಿಸಲಾಗಿದೆ.

ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೊಂಡ ಬೆನ್ನಲ್ಲೇ ಆರು ಮಂದಿ ಕೊರೊನಾ ವಾರಿಯರ್ಸ್‌ಗೆ ಸನ್ಮಾನ ಮಾಡಲಾಗಿದೆ.

Mysuru Dasaraಪೌರಕಾರ್ಮಿಕರಾದ ಮರಗಮ್ಮ, ವೈದ್ಯಕೀಯ ಅಧಿಕಾರಿ ಡಾ. ನವೀನ್ ಕುಮಾರ್, ಸ್ಟಾಫ್ ನರ್ಸ್ ರುಕ್ಮಿಣಿ, ಆಶಾ ಕಾರ್ಯಕರ್ತೆಯಾದ ನೂರ್ ಜಾನ್, ಪೊಲೀಸ್ ಕಾನ್‌ಸ್ಟೆಬಲ್ ಕುಮಾರ್ ಪಿ., ಸಾಮಾಜಿಕ ಕಾರ್ಯಕರ್ತರಾದ ಆಯೂಬ್ ಅಹಮದ್‌ಗೆ ಗಣ್ಯರ ಸಮ್ಮುಖದಲ್ಲಿ ಸನ್ಮಾನ ಮಾಡಲಾಯಿತು.

ರಾಜ್ಯದ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಮತ್ತು ದಸರಾ ಉದ್ಘಾಟಕರಾದ ಖ್ಯಾತ ಹೃದ್ರೋಗ ತಜ್ಞ ಡಾ.ಸಿಎನ್‌ ಮಂಜುನಾಥ್‌ರವರ ಸಮ್ಮುಖದಲ್ಲಿ ಕೊರೊನಾ ವಾರಿಯರ್ಸ್‌ಗಳನ್ನು ಸನ್ಮಾನಿಸಲಾಗಿದೆ. ಇಂದಿನಿಂದ ಮೈಸೂರು ದಸರಾ ಆರಂಭಗೊಂಡಿದ್ದು, ಈ ಬಾರಿ ಕೊರೊನಾ ಹಿನ್ನೆಲೆ ಸರಳವಾಗಿ ಆಚರಿಸಲಾಗುತ್ತಿದೆ.

ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಎಸ್‍ಟಿ.ಸೋಮಶೇಖರ್ ಸಚಿವರಾದ ಹೆಚ್.ವಿಶ್ವನಾಥ್, ಬಿಸಿ.ಪಾಟೀಲ್, ಶಾಸಕರಾದ ಹರ್ಷವರ್ಧನ್, ಎಸ್‍ಎ.ರಾಮ್‍ದಾಸ್, ಸಂಸದ ಪ್ರತಾಪ್ ಸಿಂಹ , ಮೇಯರ್ ತಸ್ನೀಂ, ಜಿ.ಪಂ ಅಧ್ಯಕ್ಷೆ ಬಿ.ಸಿ.ಪರಿಮಳ ಶ್ಯಾಂ ಅತಿಥಿಗಳಾಗಿ ಭಾಗವಹಿಸಿದ್ದು, ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English