ಕಾಸರಗೋಡು ಜಿಲ್ಲೆಯಲ್ಲಿ ಅಕ್ಟೋಬರ್ 31ರ ವರೆಗೆ ನಿಷೇಧಾಜ್ಞೆ ವಿಸ್ತರಣೆ

6:18 PM, Friday, October 23rd, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Kasaragodu DCಕಾಸರಗೋಡು : ಕೊರೋನ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಹಂತಹಂತವಾಗಿ ಜಾರಿಗೆ ತರಲಾಗಿದ್ದ ನಿಷೇಧಾಜ್ಞೆಯನ್ನು ಅಕ್ಟೋಬರ್ 31ರ ತನಕ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಸಜಿತ್ ಬಾಬು ಆದೇಶ ಹೊರಡಿಸಿದ್ದಾರೆ.

ಸೋಂಕು ನಿಯಂತ್ರಣದ ದ್ರಷ್ಟಿಯಿಂದ ಅಕ್ಟೋಬರ್ 3ರಿಂದ ಸೆಕ್ಷನ್ 144ರಂತೆ ನಿಷೇಧಾಜ್ಞೆಯನ್ನು ಕೇರಳದಲ್ಲಿ ಜಾರಿಗೆ ತರಲಾಗಿತ್ತು. ಆದರೆ ಕಾಸರಗೋಡು ಜಿಲ್ಲೆಯಲ್ಲಿ ಹಂತಹಂತವಾಗಿ ನಿಷೇದಾಜ್ಞೆ ಜಾರಿಗೆ ತರಲಾಗಿತ್ತು.

ಮಂಜೇಶ್ವರ, ಕುಂಬಳೆ, ಬದಿಯಡ್ಕ, ಕಾಸರಗೋಡು, ವಿದ್ಯಾನಗರ, ಮೇಲ್ಪರಂಬ, ಬೇಕಲ, ಹೊಸದುರ್ಗ, ನೀಲೇಶ್ವರ, ಚಂದೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಪ್ಪ, ಒಡೆಯಂಚಾಲ್, ಪನತ್ತಡಿ ಪೇಟೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಸ್ತರಿಸಲಾಗಿದೆ.

ಈ ಪ್ರದೇಶಗಳಲ್ಲಿ ಐದಕ್ಕಿಂತ ಅಧಿಕ ಮಂದಿ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ.

ವಿವಾಹಕ್ಕೆ 50 ಮಂದಿ, ಮರಣಾನಂತರದ ಕಾರ್ಯಕ್ರಮಗಳಿಗೆ 20 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English