ಬಂಟ್ವಾಳ : ರೌಡಿ ಶೀಟರ್ ಉಮರ್ ಫಾರೂಕ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಗುಂಡ್ಯದಲ್ಲಿ ಪೊಲೀಸರು ಗುಂಡು ಹಾರಿಸಿ ಶನಿವಾರ ಬೆಳಗ್ಗೆ ಬಂಧಿಸಿದ್ದಾರೆ.
ಕಾರಿನಲ್ಲಿ ಬೆಂಗಳೂರಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಶರಣಾಗುವಂತೆ ಸೂಚಿಸಿದರು ತಪ್ಪಿಸಲು ಯತ್ನಿಸಿದ ಆರೋಪಿಯನ್ನು ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಘಟನೆಯಲ್ಲಿ ಬಂಟ್ವಾಳ ಎಸ್ಸೈ ಪ್ರಸನ್ನ ಗಾಯಗೊಂಡಿದ್ದಾರೆ
ಮೂಲತಃ ಕಲ್ಲಡ್ಕ ನಿವಾಸಿ ಪ್ರಸಕ್ತ ನಂದಾವರದಲ್ಲಿ ವಾಸವಿರುವ ಖಲೀಲ್ ಬಂಧಿತ ಆರೋಪಿ.
ಶುಕ್ರವಾರ ಸಂಜೆ ಮೆಲ್ಕಾರ್ ಸಮೀಪದ ಬೋಗೋಡಿ ಎಂಬಲ್ಲಿ ಕಲ್ಲಡ್ಕ ನಿವಾಸಿ ರೌಡಿ ಶೀಟರ್ ಉಮರ್ ಫಾರೂಕ್ ಎಂಬಾತನನ್ನು ತಂಡವೊಂದು ಕಡಿದು ಹತ್ಯೆ ನಡೆಸಿತ್ತು. ಹತ್ಯೆಯ ಬಳಿಕ ಪರಾರಿಯಾಗಿದ್ದ ಆರೋಪಿಗಳು ಇಂದು ಬೆಳಗ್ಗೆ ಕಾರಿನಲ್ಲಿ ಬೆಂಗಳೂರಿಗೆ ಪರಾರಿಯಾಗುತ್ತಿರುವ ಮಾಹಿತಿ ಪಡೆದ ಪೊಲೀಸರು ಗುಂಡ್ಯದಲ್ಲಿ ಕಾರನ್ನು ಅಡ್ಡಗಟ್ಟಿದ್ದಾರೆ. ಈ ಸಂದರ್ಭ ಪ್ರಮುಖ ಆರೋಪಿ ಖಲೀಲ್ ನನ್ನು ಪೊಲೀಸರು ಬಂಧಿಸಿದ್ದು ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಕಾರ್ಯಾಚರಣೆ ವೇಳೆ ಆರೋಪಿ ಖಲೀಲ್ ಪೊಲೀಸರ ಮೇಲೆ ತಲವಾರು ಬೀಸಿದ್ದ ಎನ್ನಲಾಗಿದ್ದು ಇದರಿಂದ ಬಂಟ್ವಾಳ ಗ್ರಾಮಾಂತರ ಎಸ್ಸೈ ಪ್ರಸನ್ನ ಗಾಯಗೊಂಡಿದ್ದು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಲವಾರು ದಾಳಿ ವೇಳೆ ಬಂಟ್ವಾಳ ನಗರ ಠಾಣೆ ಎಸ್ಸೈ ಅವಿನಾಶ್ ಆರೋಪಿ ಖಲೀಲ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದ ಖಲೀಲ್ ಗಾಯಗೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
Click this button or press Ctrl+G to toggle between Kannada and English