ಬೆಂಗಳೂರು: ಅಭಿವೃದ್ದೀಯ ವೇಗ ಹೆಚ್ಚಿಸಲು ಸರ್ಕಾರಕ್ಕೆ ಮೇಲ್ಮನೆಯಲ್ಲಿಯೂ ಬಹುಮತ ಬೇಕು. ಇಲ್ಲವಾದರೆ ಅನಗತ್ಯ ಅಡಚಣೆ ಉಂಟಾಗುತ್ತದೆ. ಈ ಮುಂಚೆ ನರೇಂದ್ರ ಮೋದಿ ನೇತೃತ್ವದ ನಮ್ಮ ಕೇಂದ್ರ ಸರ್ಕಾರಕ್ಕೆ ರಾಜ್ಯಸಭೆಯಲ್ಲಿ ಬಹುಮತ ಇಲ್ಲದೆ ಅನೇಕ ಕ್ರಾಂತಿಕಾರಕ ಮಸೂದೆಗಳು ವಿಳಂಬಗೊಂಡವು. ಆ ಪರಿಸ್ಥಿತಿ ರಾಜ್ಯ ಬಿಜೆಪಿ ಸರ್ಕಾರಕ್ಕೆ ಬರಬಾರದು. ಹಾಗಾಗಿ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಎಲ್ಲ ನಾಲ್ವರು ಅಭ್ಯರ್ಥಿಗಳನ್ನೂ ಗೆಲ್ಲಿಸಿ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ಕರೆ ನೀಡಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ವಿವಿಧ ಕ್ಷೇತ್ರಗಳಿಂದ ಸ್ಪರ್ಧಿಸಿರುವ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಕೇಂದ್ರ ಸರ್ಕಾರವು ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರುತ್ತಿದೆ. ಶಿಕ್ಷಣ ಕ್ಷೇತ್ರದ ಅನುದಾನವನ್ನು ಜಿಡಿಪಿಯ ಶೇಕಡಾ 1.7 ರಿಂದ ಶೇಕಡಾ 6 ಕ್ಕೆ ಹೆಚ್ಚಿಸಲಾಗುತ್ತಿದೆ. ರಾಜ್ಯ ಸರ್ಕಾರವೂ ಇದಕ್ಕೆ ಪೂರಕವಾಗಿ ಸ್ಪಂದಿಸುತ್ತಿದದ್ದು ಅನೇಕ ಸುಧಾರಣೆಗಳನ್ನು ತರುತ್ತಿದೆ. ಈ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆದ್ದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನೈತಿಕ ಸ್ಥೈರ್ಯ ಇನ್ನೂ ಹೆಚ್ಚಿಲಿದೆ ಎಂದು ಅವರು ತಿಳಿಸಿದರು.
ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಪುಟ್ಟಣ್ಣ, ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಶಶಿಲ್ ನಮೋಶಿ, ಅಗ್ನೇಯ ಪದವೀಧರ ಕ್ಷೇತ್ರದಿಂದ ಚಿದಾನಂದ ಗೌಡ ಮತ್ತು ಪಶ್ಚಿಮ ಪದವೀಧರ ಕ್ಷೇತ್ರದಿಂದ ಎಸ್ ವಿ ಸಂಕನೂರು ಅವರು ಕಣದಲ್ಲಿದ್ದಾರೆ. ಪಕ್ಷದ ಈ ಎಲ್ಲ ಅಭ್ಯರ್ಥಿಗಳನ್ನು ವಿಜಯಿಶಾಲಿಗಳಾಗಿಸಿ ಎಂದು ಪ್ರಾರ್ಥಿಸಿದರು.
Click this button or press Ctrl+G to toggle between Kannada and English