- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ನವದಂಪತಿ ದಾರುಣ ಸಾವು

Rayan-priya [1]ಮಂಗಳೂರು  : ಟ್ರಕ್  ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನವದಂಪತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ ಮಂಗಳವಾರ  ಸಂಜೆ ಸಂಭವಿಸಿದೆ.

ಬಜಾಲ್ ನಿವಾಸಿ ರಯಾನ್ ಫೆರ್ನಾಂಡಿಸ್(30) ಮತ್ತು ಪ್ರಿಯಾ ಫೆರ್ನಾಂಡಿಸ್(32) ಮೃತರು.

ಕಂಕನಾಡಿ ಫಾದರ್ ಮುಲ್ಲಸ್೯ ಆಸ್ಪತ್ರೆಯಲ್ಲಿ ಸಿಬ್ಬಂದಿಯಾಗಿರುವ ಇಬ್ಬರು ಕರ್ತವ್ಯ ಮುಗಿಸಿ ಉಳ್ಳಾಲ ಬಂಗೇರಲೇನ್ ನಲ್ಲಿರುವ ಬಾಡಿಗೆ ಮನೆಗೆ ತೆರಳುವ ಸಂದರ್ಭ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಅಪಘಾತ ಸಂಭವಿಸಿದೆ.

ದಂಪತಿಗಳು ಬೈಕ್ ಮೂಲಕ  ಉಳ್ಳಾಲ ಕಡೆಗೆ ತಿರುಗುವ ಸಂದರ್ಭ ಅತಿ ವೇಗವಾಗಿ ತೊಕ್ಕೊಟ್ಟು ಫ್ಲೈಓವರ್ ಮೂಲಕ ಬಂದ ಲಾರಿ ಢಿಕ್ಕಿ ಹೊಡೆದು, ಇಬ್ಬರ ಮೇಲೂ ಚಲಿಸಿ ಕೆಲ ಮೀ. ದೂರಕ್ಕೆ ಎಳೆದುಕೊಂಡು ಹೋಗಿ ನಿಂತಿದೆ. ಘಟನೆಯಿಂದ ಪ್ರಿಯಾ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ರಯಾನ್ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಸಾವನ್ನಪ್ಪಿದ್ದಾರೆ.

Thokkottu acciident [2]

Thokkottu acciident [3]

Thokkottu acciident [4]