- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಂಗಳೂರು ದಸರಾಕ್ಕೆ ನವದುರ್ಗೆಯರು ಹಾಗೂ ಶಾರದಾಮಾತೆಯ ಮೂರ್ತಿಗಳನ್ನು ತಯಾರು ಮಾಡುವವರು ಯಾರು ಗೊತ್ತಾ ?

Kubera [1]ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಸಂಭ್ರಮಕ್ಕೆ ಪೂಜಿಸಲ್ಪಡುವ 12 ಮೂರ್ತಿಗಳನ್ನು ತಯಾರು ಮಾಡುವ ಕಲೆಗಾರರ ಬಗ್ಗೆ ನೀವು ಕೇಳಿರಲಿಕ್ಕಿಲ್ಲ ಗಣಪತಿ, ಆದಿಶಕ್ತಿ, ನವದುರ್ಗೆಯರು ಹಾಗೂ ಶಾರದಾಮಾತೆಯ ಮಣ್ಣಿನ ಗಳನ್ನು ತಯಾರಿಸುವವರು ಶಿವಮೊಗ್ಗದ ಕುಬೇರ ಹಾಗೂ ಅವರ ಬಳಗ.

ಕುದ್ರೋಳಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಆರಂಭದ ದಿನಗಳಲ್ಲಿ ರಾಜಶೇಖರ್ ಹಾಗೂ ಅವರ ತಂಡದವರು ಮೂರ್ತಿ ರಚನೆ ಮಾಡುತ್ತಿದ್ದರು. ಅದೇ ತಂಡದಲ್ಲಿ ಕಲಾವಿದನಾಗಿ ತನ್ನ 13 ವರ್ಷದ ಪ್ರಾಯದಲ್ಲೇ ಕೆಲಸ ಆರಂಭಿಸಿದ್ದ ಅದ್ಭುತ ಕಲಾವಿದ ಶಿವಮೊಗ್ಗದ ಕುಬೇರ ಹಾಗೂ ಅವರ ಬಳಗ ಕಳೆದ ನಾಲ್ಕು ವರ್ಷದಿಂದ ನವರಾತ್ರಿಯ ಎಲ್ಲಾ 12 ಮೂರ್ತಿಗಳನ್ನು ರಚಿಸುತ್ತಾರೆ.

ಸುಮಾರು 40 ದಿನಗಳ ಕಾಲ ರಾತ್ರಿ-ಹಗಲು ಈ 12 ಮೂರ್ತಿಗಳನ್ನು 15 ಮಂದಿ ಕಲಾವಿದರು ಸೇರಿ ಮೂರ್ತಿಗಳ ರಚನೆ ಮಾಡುತ್ತಾರೆ. ಪ್ರತೀ ವರ್ಷವೂ ವಿಸರ್ಜನೆಗೊಳ್ಳುವ ಈ ಮೂರ್ತಿಗಳು ಮತ್ತೆ ಮುಂದಿನ ವರ್ಷ ಪ್ರತ್ಯಕ್ಷವಾಗಿದೆಯೇ ಅನ್ನುವಷ್ಟರ ಮಟ್ಟಿಗೆ ಅಷ್ಟೇ ಸುಂದರವಾಗಿ ಈ ಕಲಾವಿದರ ತಂಡ ಮೂರ್ತಿಗಳನ್ನು ರಚಿಸುತ್ತಾರೆ.

Navadurga [2]

Navadurga [3]

Navadurga [4]Navadurga [5]

Navadurga [6]

Navadurga [7]

sharadhe [8]

Navadurga [9]

Navadurga [10]

Navadurga [11]

Navadurga [12]

Navadurga [13]