ಪತ್ರಕರ್ತ ನವೀನ್ ಸೂರಿಂಜೆ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

4:14 PM, Tuesday, December 11th, 2012
Share
1 Star2 Stars3 Stars4 Stars5 Stars
(5 rating, 1 votes)
Loading...

 DFYI SFI handcuff protestಮಂಗಳೂರು :ಮಾನವಹಕ್ಕುಗಳ ದಿನವಾದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಡಿವೈಎಫ್‌ಐ, ಎಸ್‌ಎಫ್‌ಐ ಮತ್ತು ಜನವಾದಿ ಮಹಿಳಾ ಸಂಘಟನೆಗಳಿಂದ ಮಾರ್ನಿಂಗ್ ಮಿಸ್ಟ್ ಹೋಂಸ್ಟೇ ದಾಳಿ ಪ್ರಕರಣದ ಬಗ್ಗೆ ವರದಿ ಮಾಡಿದ ಪತ್ರಕರ್ತ ನವೀನ್ ಸೂರಿಂಜೆಯ ಬಂಧನ ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು ಇದರ ಬಗ್ಗೆ ಸರಿಯಾದ ನಿರ್ಧಾರ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೈ ಕೋಳ ತೊಟ್ಟು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯ ನೇತೃತ್ವ ವಹಿಸಿದ ಡಿವೈಎಫ್‌ಐಯ ಜಿಲ್ಲಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ಮಾನವ ಹಕ್ಕುಗಳ ಉಲ್ಲಂಘನೆ ನಿರಂತರವಾಗಿ ನಡೆಯುತ್ತಿದೆ. ರಾಜ್ಯ ಸರಕಾರ ಹಾಗೂ ಜಿಲ್ಲಾಡಳಿತ ಮಾನವ ಹಕ್ಕುಗಳನ್ನು ಉಲ್ಲಂಘಿಸಿ ಅಮಾಯಕರನ್ನು ಕೈ ಕೋಳ ತೊಡಿಸಿ ಕ್ರಿಮಿನಲ್‌ನಂತೆ ಬಿಂಬಿಸುತಿದೆ. ಆಳುವವರ ತಪ್ಪುಗಳನ್ನು ಗುರುತಿಸಿದಲ್ಲಿ ಅವರನ್ನು ಸುಳ್ಳು ಕೇಸುಗಳಲ್ಲಿ ಸಿಲುಕಿಸಿ ತಿಂಗಳುಗಟ್ಟಲೆ ಜೈಲಿನಲ್ಲಿ ಇಡಲಾಗುತ್ತಿದೆ. ವಿಠಲ ಮಲೆಕುಡಿಯ ಹಾಗೂ ನವೀನ್ ಸೂರಿಂಜೆ ಪ್ರಕರಣಗಳು ಇದಕ್ಕೆ ನಿದರ್ಶನಗಳಾಗಿವೆ ಇಂತಹ ವ್ಯವಸ್ಥೆಯ ವಿರುದ್ದ ಈಗಲೇ ಎಚ್ಚತ್ತು ಕೊಳ್ಳದಿದ್ದಲ್ಲಿ ಬದುಕುವುದು ಕಷ್ಟವಾಗಬಹುದು. ಆದ್ದರಿಂದ ಸರಕಾರ ಈ ರೀತಿಯ ದೌರ್ಜನ್ಯವನ್ನು ನಿಲ್ಲಿಸಿ ನವೀನ್ ಸೂರಿಂಜೆ ಅವರನ್ನು ಬಿಡುಗಡೆ ಮಾಡುವಂತೆ ಎಲ್ಲ ಪ್ರಗತಿಪರ ಸಂಘಟನೆಗಳು ಸರಕಾರವನ್ನು ಆಗ್ರಹಿಸುತ್ತಿವೆ ಎಂದು ಅವರು ಹೇಳಿದರು.

ಡಿವೈಎಫ್‌ಐ ಕಾರ್ಯದರ್ಶಿ ದಯಾನಂದ ಶೆಟ್ಟಿ, ಇಮ್ತಿಯಾಜ್, ಸಮುದಾಯದ ಮುಖಂಡ ವಾಸುದೇವ ಉಚ್ಚಿಲ್, ಪಿಯುಸಿಎಲ್‌ನ ಪಿ. ಬಿ. ಡೇಸಾ, ಜನವಾದಿ ಮಹಿಳಾ ಸಂಘಟನೆಯ ಸುಕನ್ಯ, ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ಚಿಂತಕ ಸಿ. ಎನ್. ಶೆಟ್ಟಿ, ಪ್ರಗತಿಪರ ಚಿಂತಕರ ವೇದಿಕೆಯ ಅಧ್ಯಕ್ಷ ಪ್ರಸನ್ನ ಪ್ರತಿಭಟನಾ ಪ್ರದರ್ಶನದಲ್ಲಿ ಭಾಗವಹಿಸಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English