- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿ ವಿಫಲವಾದ ಮಹಿಳೆ, ಸಮುದ್ರಕ್ಕೆ ಹಾರಿ ಆತ್ಮಹತ್ಯೆ

Usha [1]
ಮಂಗಳೂರು : ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯೊಬ್ಬರು ಶುಕ್ರವಾರ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಚ್ಚಿಲದಲ್ಲಿ‌ ನಡೆದಿದೆ.

ಇಲ್ಲಿನ ಸಂಕೊಳಿಗೆ ನಿವಾಸಿಯಾಗಿರುವ ಉಷಾ (60) ಎಂಬಾಕೆಯ ಮೃತದೇಹ ಉಚ್ಚಿಲ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.

ಮಾನಸಿಕವಾಗಿ ನೊಂದಿದ್ದ ಮಹಿಳೆ ಈ ಹಿಂದೆಯೂ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಸ್ಥಳಕ್ಕಾಗಮಿಸಿದ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.