ಮಂಗಳೂರು : ಫಳ್ನೀರ್ನ ಜ್ಯೂಸ್ ಮಳಿಗೆಯೊಂದರಲ್ಲಿ ಮಂಗಳವಾರ ಸಂಜೆ 5:30ರ ಸುಮಾರಿಗೆ ಯುವಕರ ತಂಡ ಯೊಂದು ಗ್ರಾಹಕರಾಗಿ ಆಗಮಿಸಿ ಸಮೋಸ ಕೇಳಿ ನಾಲ್ವರು ಹೊಟೇಲ್ ಸಿಬ್ಬಂದಿ ಜೊತೆ ಜಗಳ ತೆಗೆದಿದ್ದು, ನಂತರ ಹೊಟೇಲ್ನ ಕಿಟಕಿ ಗಾಜು, ಪೀಠೋಪಕರಣ ಧ್ವಂಸಗೊಳಿಸಿ ಪರಾರಿಗೆ ಯತ್ನಿಸಿದ ಘಟನೆ ನಡೆದಿದೆ.
ಫಳ್ನೀರ್ ನಿವಾಸಿ ಸಾಹಿಲ್ (30) ಮತ್ತು ಸುರತ್ಕಲ್ ನಿವಾಸಿ ಸೈಫ್ (25) ಗಾಯಗೊಂಡವರು. ಘಟನೆಯಲ್ಲಿ ಭಾಗಿಯಾಗಿದ್ದರು ಎನ್ನಲಾದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನಿಬ್ಬರು ಪರಾರಿಯಾಗಿದ್ದಾರೆ ಪೊಲೀಸರು ತಿಳಿಸಿದ್ದಾರೆ.
ಅವರನ್ನು ಹಿಡಿಯಲು ಯತ್ನಿಸಿದ ಹೊಟೇಲ್ ಸಿಬ್ಬಂದಿ ಮೇಲೆ ಎರಡು ಸುತ್ತು ಗುಂಡು ಹಾರಿಸಿದ್ದರು. ಇದರಿಂದ ಗುಂಡು ತಗುಲಿ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಪರಾರಿಯಾಗಲು ಯತ್ನಿಸಿದ್ದ ಇಬ್ಬರನ್ನು ಸ್ಥಳೀಯರು ಸೇರಿ ಹಿಡಿದಿದ್ದು, ಇನ್ನಿಬ್ಬರು ಆಟೋರಿಕ್ಷಾದಲ್ಲಿ ಪರಾರಿಯಾಗಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.
ಪಿಸ್ತೂಲು ದಾಳಿ ಮಾಡಿದವರು ವೃತ್ತಿಪರ ಗೂಂಡಾಗಲೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಕುರಿತು ಮಂಗಳೂರು ದಕ್ಷಿಣ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Click this button or press Ctrl+G to toggle between Kannada and English