ಕಾಸರಗೋಡು : ಜಿಲ್ಲೆಯಲ್ಲಿ ಅಕ್ಟೋಬರ್ 3 ರಿಂದ ಜಾರಿಯಲ್ಲಿರುವ 144 ನಿಷೇಧಾಜ್ಞೆಯನ್ನು ನವಂಬರ್ 15 ರ ತನಕ ವಿಸ್ತರಿಸಿ ಜಿಲ್ಲಾಧಿಕಾರಿ ಡಾ .ಡಿ ಸಜಿತ್ ಬಾಬು ಆದೇಶ ಹೊರಡಿಸಿದ್ದಾರೆ.
ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖ ಆಗದ ಕಾಣದ ಹಿನ್ನಲೆಯಲ್ಲಿ ಇನ್ನೂ 15 ದಿನಗಳ ಕಾಲ ನಿಷೇಧಾಜ್ಞೆಯನ್ನು ವಿಸ್ತರಿಸಲಾಗಿದೆ.
ಮಂಜೇಶ್ವರ, ಕುಂಬಳೆ, ಬದಿಯಡ್ಕ, ಕಾಸರಗೋಡು, ವಿದ್ಯಾನಗರ, ಮೇಲ್ಪರಂಬ, ಬೇಕಲ, ಹೊಸದುರ್ಗ, ನೀಲೇಶ್ವರ, ಚಂದೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಪ್ಪ, ಒಡೆಯಂಚಾಲ್, ಪನತ್ತಡಿ ಪೇಟೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಸ್ತರಿಸಲಾಗಿದೆ.
ಸೋಂಕು ನಿಯಂತ್ರಣದ ಹಿನ್ನಲೆಯಲ್ಲಿ ಹಲವು ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದ್ದು, ಹೊರ ರಾಜ್ಯಗಳಿಂದ ಆಗಮಿಸುವವರಿಗೆ ಗಡಿ ಪ್ರದೇಶದ ರಸ್ತೆಗಳಲ್ಲಿ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದ್ದು, 17 ರಸ್ತೆಗಳ ಪೈಕಿ ಐದು ರಸ್ತೆಗಳಲ್ಲಿ ಆಂಟಿಜನ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 18, 640 ಮಂದಿಗೆ ಸೋಂಕು ದೃಢಪಟ್ಟಿದ್ದು, 16, 738 ಮಂದಿ ಗುಣಮುಖರಾಗಿದ್ದಾರೆ. 1713 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 189ಮಂದಿ ಮೃತಪಟ್ಟಿದ್ದಾರೆ.
Click this button or press Ctrl+G to toggle between Kannada and English
November 1st, 2020 at 06:04:18
Sir
144 ಸೆಕ್ಷನ್ ಗೊತ್ತಿದೆ.114 ಯಾವ ಸೆಕ್ಷನ್ ಅಂತ ಗೊತ್ತಿಲ್ಲ.