ಮಂಗಳೂರು : ಕೇರಳ ಮೂಲದ ಉದ್ಯಮಿಯನ್ನು ಮನೆಯಲ್ಲೇ ಕೊಲೆಗೈದ ದುಷ್ಕರ್ಮಿಗಳು

10:14 PM, Tuesday, November 3rd, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Murder ಮಂಗಳೂರು : ಕೇರಳ ಮೂಲದ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಚೂರಿಯಿಂದ ಹಾಡಹಗಲೇ ಇರಿದು ಹತ್ಯೆ ಮಾಡಿದ ಘಟನೆ ನಗರದ ಕಾವೂರಿನಲ್ಲಿ ಮಂಗಳವಾರ ನಡೆದಿದೆ.

ಕಾವೂರು ಮಲ್ಲಿ ಲೇಔಟ್ ನಿವಾಸಿ ಸುರೇಂದ್ರನ್ (60) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ.

ಮೂಲತಃ ಕೇರಳದವರಾದ ಸುರೇಂದ್ರನ್ ಅವರು ಹಲವು ವರ್ಷಗಳಿಂದ ಕಾವೂರು ಮಲ್ಲಿ ಲೇಔಟ್‌ನಲ್ಲೇ ಸ್ವಂತ ಮನೆ ಮಾಡಿ ತನ್ನ ಪತ್ನಿ ಜತೆ ವಾಸಿಸುತ್ತಿದ್ದರು. ಮಂಗಳವಾರ ಸುರೇಂದ್ರನ್ ನಗರಕ್ಕೆ ಹೋಗಿದ್ದರೆ, ಅವರ ಪತ್ನಿ ಫಾರ್ಮ್ ಉದ್ಯಮ ವ್ಯವಹಾರ ನೋಡಿಕೊಳ್ಳಲು ತೆರಳಿದ್ದರು. ಮಧ್ಯಾಹ್ನ 1 ಗಂಟೆ ವೇಳೆಗೆ ಸುರೇಂದ್ರನ್ ಅವರು ಮನೆಗೆ ಮರಳಿ ಬಂದಿದ್ದು, ಆ ಬಳಿಕ ದುಷ್ಕರ್ಮಿಗಳು ಕೊಲೆ ಕೃತ್ಯವೆಸಗಿದ್ದಾರೆ ಎಂದು ತಿಳಿದುಬಂದಿದೆ.

ಸುರೇಂದ್ರನ್ ಅವರ ಪತ್ನಿ ಸಂಜೆ ವೇಳೆ ಮನೆಗೆ ಬಂದಾಗ ಮನೆ ಸುತ್ತ ಜನ ಸೇರಿದ್ದರು. ಪತಿ ಕೊಲೆಯಾದ ವಿಷಯ ಅವರಿಗೆ ತಿಳಿದಿರಲಿಲ್ಲ. ಸುರೇಂದ್ರನ್ ಕೊಲೆಗೆ ಸ್ಪಷ್ಟ ಕಾರಣವೇನೆಂದು ತಿಳಿದು ಬಂದಿಲ್ಲ.

ಈ ಕುರಿತು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

                       

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English