- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಚೆನ್ನ ಫಾರೂಕ್ ಹತ್ಯೆ ಪ್ರಕರಣದ ಮತ್ತಿಬ್ಬರು ಆರೋಪಿಗಳ ಬಂಧನ

Chenne Farooq [1]ಬಂಟ್ವಾಳ :  ಚೆನ್ನ ಫಾರೂಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಎಸ್ ಐ ಅವಿನಾಶ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ತೊಕ್ಕೊಟ್ಟು ಸಮೀಪದಿಂದ ಬಂಧಿಸಿದ್ದಾರೆ.

ತೊಕ್ಕೊಟ್ಟುವಿನಲ್ಲಿ ವಾಸವಾಗಿರುವ ಹಫೀಸ್ ಯಾನೆ ಅಪ್ಪಿ ಹಾಗೂ ಅಕ್ಕರಂಗಡಿ ನಿವಾಸಿ ಇರ್ಶಾದ್ ಬಂಧಿತ ಆರೋಪಿಗಳು. ಮೆಲ್ಕಾರ್ ಸಮೀಪ ಫಾರೂಕ್ ಯಾನೆ ಚೆನ್ನ ಫಾರೂಕ್ ಕಲ್ಲಡ್ಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ಎಸ್.ಐ ಅವಿನಾಶ್ ನೇತೃತ್ವದ ತಂಡ ಗುರುವಾರ ಸಂಜೆ ಬಂಧಿಸಿದೆ.

ಮೂಲತಃ ನಂದಾವರ ನಿವಾಸಿ ಪ್ರಸ್ತುತ ಅ.22 ರಂದು ಮೆಲ್ಕಾರ್ ಸಮೀಪದ ಗುಡ್ಡೆ ಅಂಗಡಿ ಎಂಬಲ್ಲಿ ಕಲ್ಲಡ್ಕ ನಿವಾಸಿ ಫಾರೂಕ್ ಯಾನೆ ಚೆನ್ನಫಾರೂಕ್ ಎಂಬಾತ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ಸ್ನೇಹಿತ ಖಲೀಲ್ ಮತ್ತು ತಂಡ ಡಿಕ್ಕಿ ಹೊಡೆಸಿ ಅಟ್ಟಾಡಿಸಿಕೊಂಡು ಕೊಚ್ಚಿ ಕೊಲೆ ನಡೆಸಿದೆ.

ಸ್ನೇಹಿತರ ನಡುವೆ ಹಣದ ಮತ್ತು ವೈಯಕ್ತಿಕ ವಿಚಾರದಲ್ಲಿ ಮನಸ್ತಾಪ ಉಂಟಾಗಿ ಕೊಲೆ ನಡೆಸಿದ್ದ ಎಂದು ಹೇಳಲಾಗಿತ್ತು. ಖಲೀಲ್ ಮತ್ತು ಆತನ ಸ್ನೇಹಿತರಾದ ಹಫೀಸ್ ಯಾನೆ ಅಪ್ಪಿ ಹಾಗೂ ಇರ್ಶಾದ್ ಕೊಲೆ ನಡೆಸಿ ಪರಾರಿಯಾಗಿದ್ದನ್ನು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೊಲೆ ನಡೆಸಿದವರ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆರೋಪಿಗಳ ಬಂಧನಕ್ಕೆ ಎರಡು ತಂಡ ರಚಿಸಿದ್ದರು.

ಕೊಲೆ ನಡೆಸಿ ಬಳಿಕ ಬೆಂಗಳೂರು ಕಡೆಗೆ ಪರಾರಿಯಾಗಲು ಯತ್ನಿಸುತ್ತಿರುವ ಬಗ್ಗೆ ಪೋಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ನಗರ ಠಾಣಾ ಎಸ್.ಐ. ಅವಿನಾಶ್ ಹಾಗೂ ಗ್ರಾಮಾಂತರ ಠಾಣಾ ಎಸ್.ಐ ಪ್ರಸನ್ನ ಬಿಸಿರೋಡಿನಿಂದ ಗುಂಡ್ಯ ವರೆಗೆ ವಾಹನವನ್ನು ಬೆನ್ನಟ್ಟಿಕೊಂಡು ಹೋಗಿ ಗುಂಡ್ಯ ತಲುಪುತ್ತಿದ್ದಂತೆ ಖಲೀಲ್ ನ ವಾಹನಕ್ಕೆ ಅಡ್ಡಲಾಗಿ ಇರಿಸಿ ಬಂಧಿಸಲು ಮುಂದಾಗಿದ್ದರು.

ಆದರೆ ಖಲೀಲ್ ಮತ್ತು ಆತನ ಸಹಚರರಾದ ಹಫೀಸ್ ಮತ್ತು ಇರ್ಶಾದ್ ಪೋಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದರು. ಈ ವೇಳೆ ಪೊಲೀಸರು ಮತ್ತು ಆರೋಪಿಗಳ ನಡುವೆ ಗಲಾಟೆ ಯಲ್ಲಿ ಗ್ರಾಮಾಂತರ ಠಾಣಾ ಎಸ್.ಐ. ಪ್ರಸನ್ನ ಅವರು ಗಾಯಗೊಂಡಿದ್ದರು. ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿ ಪರಾರಿಯಾಗಲು ಯತ್ನಿಸಿದಾಗ ನಗರ ಠಾಣಾ ಎಸ್.ಐ.ಅವಿನಾಶ್ ಆರೋಪಿ ಖಲೀಲ್ ಮೇಲೆ ಗುಂಡು ಹಾರಿಸಿ ಬಂಧಸಿದ್ದರು.

ಆದರೆ ಉಳಿದ ಇಬ್ಬರು ಆರೋಪಿಗಳು ಗುಂಡ್ಯ ದ ಗುಡ್ಡೆಯಲ್ಲಿ ಪರಾರಿಯಾಗಿದ್ದರು. ಇದೀಗ ಪರಾರಿಯಾಗಿದ್ದ ಹಫೀಸ್ ಯಾನೆ ಅಪ್ಪಿ ಹಾಗೂ ಇರ್ಶಾದ್ ಇಬ್ಬರು ಆರೋಪಿಗಳನ್ನು ಗುರುವಾರ ಸಂಜೆ ತೊಕ್ಕೊಟ್ಟುವಿನಲ್ಲಿ ಬಂಧಿಸಿದ್ದಾರೆ.