ಪರವಾನಗಿ ಇಲ್ಲದೆ ವ್ಯಾಪಾರ ಮನಪಾ ಮೇಯರ್ ದಿಢೀರ್ ದಾಳಿ

11:40 PM, Sunday, November 8th, 2020
Share
1 Star2 Stars3 Stars4 Stars5 Stars
(No Ratings Yet)
Loading...

mcc raid ಮಂಗಳೂರು: ಕಟ್ಟಡ ಪರವಾನಿಗೆ, ಉದ್ದಿಮೆ ಪರವಾನಗಿ ಇಲ್ಲದೆ ಹಾಗೂ ಉದ್ದಿಮೆ ಪರವಾನಗಿ ನವೀಕರಿಸದೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ  ಅನಧಿಕೃತವಾಗಿ ವ್ಯಾಪಾರ ನಡೆಸುತ್ತಿರುವ ಮಳಿಗೆಗೆ ದಿಢೀರ್ ದಾಳಿ ನಡೆಸಲಾಗಿದೆ.

ದಾಳಿ ನಡೆಸಿದ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಮೇಯರ್ ದಿವಾಕರ ಪಾಂಡೇಶ್ವರ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪಾಲಿಕೆ ಆಯುಕ್ತರು, ಮೇಯರ್ ಹಾಗೂ ಅಧಿಕಾರಿಗಳ ತಂಡ ಇಂದು ಬೆಳಗ್ಗೆ ನಗರದ ಹಲವು ಅಂಗಡಿಗಳ ಮೇಳೆ ದಿಢೀರ್ ದಾಳಿ ನಡೆಸಿದ್ದು, ಹಲವಾರು ಮಂದಿ ಉದ್ದಿಮೆ ಪರವಾನಗಿ ಇಲ್ಲದೆ ವ್ಯಾಪಾರ ವಹಿವಾಟು ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ‌.

ಹಲವಾರು ಕಟ್ಟಡಗಳ ದಾಖಲೆಗಳನ್ನು ಪರಿಶೀಲಿಸಿದ ಮೇಯರ್ ದಿವಾಕರ ಅವರು ಅನಧಿಕೃತ ಕಟ್ಟಡಗಳನ್ನು ಮುಚ್ಚಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English