ಶಿರಾದಲ್ಲಿ ಡಾ. ರಾಜೇಶ್ ಗೌಡ ಮತ್ತು ರಾಜರಾಜೇಶ್ವರಿ ನಗರ ದಲ್ಲಿ ಮುನಿರತ್ನ ಗೆಲುವು

2:52 PM, Tuesday, November 10th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

RR Nagarಬೆಂಗಳೂರು : ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ

ಶಿರಾದಲ್ಲಿ ಡಾ. ರಾಜೇಶ್ ಗೌಡ 63,294 ಮತ. ಟಿ. ಬಿ. ಜಯಚಂದ್ರ 52,914 ಮತ. ಅಮ್ಮಾಜಮ್ಮ 29,166 ಮತಗಳನ್ನು ಪಡೆದಿದ್ದಾರೆ.

ಆರ್. ಆರ್. ನಗರ 24ನೇ ಸುತ್ತಿನ ಎಣಿಕೆ. ಮುನಿರತ್ನ 1,24,446 ಮತ. ಕುಸುಮಾ 67,405 ಮತ. ಕೃಷ್ಣಮೂರ್ತಿ 10,187 ಮತಗಳು.

ರಾಜರಾಜೇಶ್ವರಿ ನಗರ
ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಗೆಲುವು ಸಾಧಿಸಿದ್ದಾರೆ. ಈ ಮೂಲಕ 3ನೇ ಬಾರಿಗೆ ಆರ್. ಆರ್. ನಗರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು.

ಮಂಗಳವಾರ ಆರ್. ಆರ್. ನಗರ ಕ್ಷೇತ್ರದ ಮತ ಎಣಿಕೆ ಕಾರ್ಯ ನಡೆಯಿತು. ಶ್ರೀ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಿತು. ಮೊದಲ ಸುತ್ತಿನಿಂದಲೇ ಮುನಿರತ್ನ ಅವರು ಮುನ್ನಡೆ ಕಾಯ್ದುಕೊಂಡರು.

ಕಾಂಗ್ರೆಸ್‌ ಅಭ್ಯರ್ಥಿ ಹೆಚ್. ಕುಸುಮಾ ಮತ್ತು ಮುನಿರತ್ನ ನಡುವೆ ಭಾರಿ ಪೈಪೋಟಿ ನಿರೀಕ್ಷೆ ಮಾಡಲಾಗಿತ್ತು. ಆದರೆ, ಮುನಿರತ್ನ ಅವರು ಭಾರಿ ಮುನ್ನಡೆಯೊಂದಿಗೆ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕ್ಷೇತ್ರದಲ್ಲಿ 3ನೇ ಬಾರಿಗೆ ಗೆದ್ದಿದ್ದಾರೆ. ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಬಿಜೆಪಿಯ ಮುನಿರತ್ನ ಅವರು 1,25,734 ಮತಗಳನ್ನು ಪಡೆದು 57,936 ಮತಗಳ ಅಂತರದಿಂದ ಗೆಲುವು ಸಾಧಿಸಿದರು.

25ನೇ (ಕೊನೆ) ಸುತ್ತಿನ ಎಣಿಕೆ ಮುಕ್ತಾಯವಾಗಿದೆ. ಮುನಿರತ್ನ1,25,734 ಮತ. ಕಾಂಗ್ರೆಸ್‌ನ ಹೆಚ್. ಕುಸುಮಾ 67,798 ಮತ. ಜೆಡಿಎಸ್‌ನ ಕೃಷ್ಣಮೂರ್ತಿ10251 ಮತ ಪಡೆದಿದ್ದಾರೆ. ಒಟ್ಟು ಚಲಾವಣೆಯಾದ ನೋಟಾ ಮತಗಳು 2,494.

ಆರ್. ಆರ್. ನಗರ ಕ್ಷೇತ್ರದಲ್ಲಿ ಮುನಿರತ್ನ ಅವರು ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. 2013 ಮತ್ತು 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮುನಿರತ್ನ ಆರ್. ಆರ್. ನಗರದಲ್ಲಿ ಗೆಲುವು ಸಾಧಿಸಿದ್ದರು.

ಶಿರಾ ಕ್ಷೇತ್ರ
ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ ಗೌಡ ಜಯಭೇರಿ ಬಾರಿಸಿದ್ದಾರೆ. ಇದೇ ಮೊದಲ ಬಾರಿಗೆ ಶಿರಾ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಬಿಜೆಪಿ ಇತಿಹಾಸ ನಿರ್ಮಾಣ ಮಾಡಿದೆ. ಶಿರಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಮಂಗಳವಾರ ತುಮಕೂರು ನಗರದ ಪಾಲಿಟೆಕ್ನಕ್ ಕಾಲೇಜಿನಲ್ಲಿ ನಡೆಯಿತು. ಬಿಜೆಪಿಯ ಡಾ. ರಾಜೇಶ್ ಗೌಡ ಕಾಂಗ್ರೆಸ್‌ನ ಟಿ. ಬಿ. ಜಯಚಂದ್ರ ಅವರ ಪೈಪೋಟಿಯ ನಡುವೆಯೂ ಗೆಲುವು ಸಾಧಿಸಿದರು.

ಉಪ ಚುನಾವಣೆ ಮತ ಎಣಿಕೆ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ನಡೆಯಿತು. 2018ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಿತ್ತು. ಉಪ ಚುನಾವಣೆ ಸೋಲುವ ಮೂಲಕ ಜೆಡಿಎಸ್ ಕ್ಷೇತ್ರವನ್ನು ಕಳೆದುಕೊಂಡಿದೆ.

ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ 69,559 ಮತಗಳನ್ನು ಪಡೆದಿದ್ದಾರೆ. ಇವಿಎಂ ಕೌಂಟಿಂಗ್ ಮುಗಿದ ಬಳಿಕ ಬೂತ್‌ಗಳ ವಿವಿಪ್ಯಾಟ್ ಸ್ಲಿಪ್ ಎಣಿಕೆ ನಡೆಯಲಿದೆ. ಬಳಿಕ ಚುನಾವಣಾ ಆಯೋಗ ಅಭ್ಯರ್ಥಿ ಗೆಲುವಿನ ಬಗ್ಗೆ ಅಧಿಕೃತ ಘೋಷಣೆ ಮಾಡಲಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English