ಕ್ರೈಬ್ರಾಂಚ್ ಪೊಲೀಸರೆಂದು ನಂಬಿಸಿ ಚಿನ್ಮಾಭರಣ ದರೋಡೆ, ಇಬ್ಬರ ಬಂಧನ

11:34 PM, Wednesday, November 11th, 2020
Share
1 Star2 Stars3 Stars4 Stars5 Stars
(No Ratings Yet)
Loading...

irani Gangಬಂಟ್ವಾಳ :  ಕ್ರೈಬ್ರಾಂಚ್ ಪೊಲೀಸರೆಂದು ನಂಬಿಸಿ ಬಿ.ಸಿ.ರೋಡಿನ ಕೈಕಂಬದಲ್ಲಿ ವ್ಯಕ್ತಿಯೊಬ್ಬರ ಚಿನ್ಮಾಭರಣ ದೋಚಿದ ಪ್ರಕರಣದಲ್ಲಿ ಬಂಧನಕ್ಕೊಳಗಾದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಮಹಾರಾಷ್ಟ್ರ ದ ಝಾಕಿರ್ ಹುಸೈನ್(26) ಮತ್ತು ಕಂಬರ್ ರಹೀಂ ಮಿರ್ಜಾ(32) ಬಂಧಿತ ಆರೋಪಿಗಳು.

ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಿತ್ತಬೈಲು ಕೊಡಂಗೆ ನಿವಾಸಿ ಶಿವಪ್ರಸಾದ್ ಶರ್ಮ ಅವರು  2020ರ ಜ.18ರಂದು ಮಧ್ಯಾಹ್ನ  ಕೈಕಂಬದಲ್ಲಿ ನಡೆದುಕೊಂಡು ಹೋಗುವ ವೇಳೆ ಬೈಕಿನಲ್ಲಿ ಬಂದ ಇಬ್ಬರು ಹಿಂದಿ ಭಾಷೆಯಲ್ಲಿ ಮಾತನಾಡಿ, ನಾವು ಕ್ರೈಂ ಬ್ರಾಂಚ್ ಪೊಲೀಸರು. ನಿಮ್ಮನ್ನು ತಪಾಸಣೆ ಮಾಡಬೇಕಿದೆ ಎಂದಿದ್ದು, ಈ ವೇಳೆ ಶಿವಪ್ರಸಾದ್ ಅವರು ಇಬ್ಬರಲ್ಲಿ ಗುರುತಿನ ಚೀಟಿ ಕೇಳಿದಾಗ ಆಶೋಕ್ ಕುಮಾರ್, ಕ್ರೈಂ ಬ್ರಾಂಚ್ ಎಂದು ಬರೆದಿರುವ ಕಾರ್ಡ್ ತೋರಿಸಿದ್ದಾರೆ. ಬಳಿಕ ಶಿವಪ್ರಸಾದ್ ಬಳಿ ಇದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದನ್ನು ಪಡೆದು ಬೈಕಿನಲ್ಲಿ ಪರಾರಿಯಾಗಿದ್ದರು.

ಈ ಪ್ರಕರದಣಲ್ಲಿ ಉಡುಪಿ ನಗರ ಪೊಲೀಸರು ಇರಾನಿ ಗ್ಯಾಂಗ್ ನ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿ ದಾಗ ಬಂಟ್ವಾಳದ ಪ್ರಕರಣದ ಬಗ್ಗೆ ಬಾಯಿಬಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ‌.

ಇದೇ ರೀತಿ ಕುಂದಾಪುರ ಮತ್ತು ಉಡುಪಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹಿರಿಯಡ್ಕ ಕಾರಾಗೃಹದಲ್ಲಿದ್ದ ಆರೋಪಿಗಳನ್ನು ಇಲ್ಲಿನ ಪ್ರಕರಣದ ವಿಚಾರಣೆಗಾಗಿ ಬಂಟ್ವಾಳ ನಗರ ಠಾಣೆಗೆ ಆರೋಪಿಗಳನ್ನು ಕರೆತಂದಿದ್ದು ಆರೋಪಿಗಳ ವಿಚಾರಣೆ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯ ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಅಪರಾಧ ವಿಭಾಗದ ಎಸ್ಸೈ ಕಲೈಮಾರ್ ಪಿ. ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದು ತನಿಖೆಗೆ ಒಳಪಡಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English