ಖ್ಯಾತ ಪತ್ರಕರ್ತ ರವಿ ಬೆಳಗೆರೆ ಇನ್ನಿಲ್ಲ

10:51 AM, Friday, November 13th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Ravi Belagareಬೆಂಗಳೂರು: ಖ್ಯಾತ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 62 ವರ್ಷದ ರವಿ ಬೆಳಗೆರೆಯವರಿಗೆ ಮಧ್ಯರಾತ್ರಿ ಹನ್ನೆರಡರ ಸುಮಾರಿಗೆ ಹೃದಯಾಘಾತವಾದ ಹಿನ್ನೆಲೆಯಲ್ಲಿ ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಅದಾಗಲೇ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ.

ಪದ್ಮನಾಭ ನಗರದ ತಮ್ಮ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗಲೇ ಬೆಳಗೆರೆಯವರಿಗೆ ಹೃದಯಾಘಾತವಾಗಿದ್ದು, ಅಲ್ಲಿನ ಸಿಬ್ಬಂದಿ ಕೂಡಲೇ ಅಪೋಲೋ ಆಸ್ಪತ್ರೆಗೆ ಅವರನ್ನು ದಾಖಲಿಸಿದರೂ ಬೆಳಗಿನ ಜಾವ 2.30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಹಾಯ್‌ ಬೆಂಗಳೂರು ಪತ್ರಿಕೆ ಸ್ಥಾಪನೆ ಮಾಡಿ ಕರ್ನಾಟಕದ ಮೂಲೆಮೂಲೆಯ ಜನರಿಗೂ ಚಿರಪರಿಚಿತರಾಗಿದ್ದತು. ಓ ಮನಸೇ ಮೂಲಕ ಜನಪ್ರಿಯಾಗಿದ್ದ ಇವರು, ಕಾದಂಬರಿ,ಅನುವಾದ, ಜೀವನ ಕಥನ ಸೇರಿದಂತೆ ಇನ್ನಿತರ ಬರಹಗಳನ್ನು ಬರೆದಿದ್ದ ಬೆಳಗೆರೆಯವರ ಪುಸ್ತಕಗಳು ಅಚ್ಚರಿಯ ರೀತಿಯಲ್ಲಿ ಮಾರಾಟವಾಗುತ್ತಿದ್ದವು.

ನಗರದ ಕರಿಷ್ಮಾ ಹಿಲ್‌ನಲ್ಲಿರುವ ಬೆಳಗೆರೆ ನಿವಾಸಕ್ಕೆ ಪಾರ್ಥೀವ ಶರೀರವನ್ನು ರವಾನೆ ಮಾಡಲಾಗಿದ್ದು, ರವಿ ಬೆಳಗೆರೆಯವರ ಕನಸಿನ ಪ್ರಾರ್ಥನಾ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸುವುದಾಗಿ ತಿಳಿದುಬಂದಿದೆ. ಬೆಳಗೆರೆಯವರ ಮೊದಲ ಪತ್ನಿಗೆ ಇಬ್ಬರು ಪುತ್ರಿಯರು ಮತ್ತು ಎರಡನೇ ಪತ್ನಿಗೆ ಒಬ್ಬ ಮಗನಿದ್ದಾನೆ. ಬೆಳಗೆರೆ ನಿಧನದಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಲಕ್ಷಾಂತರ ಅಭಿಮಾನಿಗಳು ಶೋಕಸಾಗರದಲ್ಲಿ ಮುಳುಗಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English