ಕಂದಾವರ ಮಸೀದಿ ಬಳಿ ವ್ಯಕ್ತಿಯೊಬ್ಬರ ಮೇಲೆ ತಲವಾರು ದಾಳಿ

4:06 PM, Monday, November 16th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Kandavara Attackಮಂಗಳೂರು : ಉದ್ಯಮಿಯೊಬ್ಬರ ಮೇಲೆ ಇಬ್ಬರು ಯುವಕರು ತಲವಾರು ದಾಳಿ ನಡೆಸಿ ಪರಾರಿಯಾದ ಘಟನೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಂದಾವರ ಬಳಿ‌ ರವಿವಾರ ರಾತ್ರಿ‌  ನಡೆದಿದೆ.

ಕಂದಾವರ ಕೈಕಂಬದ ಅಬ್ದುಲ್ ಅಝೀಝ್ (56)ದಾಳಿಗೊಳಗಾದ ಉದ್ಯಮಿ.

ಅವರು ರಾತ್ರಿ ಸುಮಾರು 10:30ಕ್ಕೆ ಮಸೀದಿಯಲ್ಲಿ ನಮಾಝ್ ಮಾಡಿ ಮನೆಗೆ ಮರಳಲು ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿದ್ದಾಗ ಇಬ್ಬರು ಯುವಕರು ತಲವಾರಿನಿಂದ ಅಝೀಝ್ ಅವರ ತಲೆ, ಕೈ, ಕಾಲಿಗೆ ಕಡಿದು, ಗಂಭೀರ ಗಾಯಗೊಳಿಸಿ, ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಗಾಯಗೊಂಡ ಅಝೀಝ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಲ್ಲಿ ವೆನ್ಝ್ ಬಟ್ಟೆಬರೆ ಅಂಗಡಿ ಹೊಂದಿರುವ ಅಝೀಝ್ ಕಂದಾವರ ಮಸೀದಿಯ ಆಡಳಿತ ಕಮಿಟಿಯಲ್ಲೂ ಸಕ್ರಿಯರಾಗಿದ್ದರು. ಪ್ರಕರಣ ದಾಖಲಿಸಿರುವ ಬಜ್ಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English