ಮಂಗಳೂರು : ಗೋವನ್ನು ವಿಶ್ವದ ತಾಯಿ ಎಂದು ಬಣ್ಣಿಸಲಾಗಿದೆ. ಮನುಷ್ಯನ ಹುಟ್ಟಿನಿಂದ ಸಾವಿನವರೆಗೆ ಗೋವು ಅವಿಭಾಜ್ಯ ಅಂಗವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಗೋಪೂಜೆ ನೆರವೇರಿಸಿದ ಅವರು, ಪ್ರತಿ ವರ್ಷದಂತೆ ಈ ಬಾರಿಯೂ ಬಿಜೆಪಿ ಕಚೇರಿ ಮುಂಭಾಗ ಗೋಪೂಜೆ ನೆರವೇರಿಸಲಾಗಿದೆ ಎಂದು ಹೇಳಿದರು.
ಗೋವಿನ ಸಂರಕ್ಷಣೆ ಎಂದರೆ ರಾಷ್ಟ್ರದ, ಕೃಷಿ ಹಾಗೂ ಕುಟುಂಬದ ಸಂರಕ್ಷಣೆ ಮಾಡಿದಂತೆ . ಹಾಗಾಗಿ ತನ್ನದೆಲ್ಲವನ್ನೂ ತ್ಯಾಗ ಮಾಡುವ ಗೋವಿನ ಪೂಜೆ ಮಾಡುವುದು ಭಾರತೀಯ ಸಂಸ್ಕೃತಿ.ಆದ್ದರಿಂದ ದೀಪಾವಳಿ ಸಂದರ್ಭದಲ್ಲಿ ಗೋವಿಗೆ ಪೂಜೆ ಮಾಡುವ ವಿಶಿಷ್ಟವಾದ ಸಂಸ್ಕೃತಿಯನ್ನು ಬೆಳೆಸಿಕೊಂಡು ಬರಲಾಗಿದೆ ಎಂದು ನಳಿನ್ ಕುಮಾರ್ ಕಟೀಲು ಹೇಳಿದರು.
Click this button or press Ctrl+G to toggle between Kannada and English