ಕೊರೋನ ಲಾಕ್ ಡೌನ್ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ಪದವಿ ಕಾಲೇಜುಗಳು ಆರಂಭ

3:29 PM, Tuesday, November 17th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Degree college ಮಂಗಳೂರು : ಕೊರೋನ ಲಾಕ್ ಡೌನ್ ಬಳಿಕ  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ಪದವಿ ಕಾಲೇಜುಗಳಲ್ಲಿ ತರಗತಿಗಳು ಇಂದಿನಿಂದ ಆರಂಭಗೊಂಡಿವೆ.

ಮಂಗಳೂರಿನ ಕಾರ್ ಸ್ಟ್ರೀಟ್ ನಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಹಲವು ಕಾಲೇಜುಗಳಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳೊಂದಿಗೆ ತರಗತಿ ಆರಂಭಿಸಲಾಗಿದೆ.

ಕೋವಿಡ್-19 ನೆಗೆಟಿವ್ ವರದಿ ಇದ್ದ ವಿದ್ಯಾರ್ಥಿಗಳಿಗೆ ಮಾತ್ರ ತರಗತಿಗಳಿಗೆ ಪ್ರವೇಶ ಕಲ್ಪಿಸಲಾಗಿದೆ. ಅದೇರೀತಿ ಕಾಲೇಜಿಗೆ ಆಗಮಿಸುವುದಕ್ಕೆ ಸಮ್ಮತಿ ಇರುವುದಾಗಿ ಪೋಷಕರಿಂದ ಒಪ್ಪಿಗೆ ಪತ್ರ ತಂದಿರುವ ವಿದ್ಯಾರ್ಥಿಗಳಿಗೆ ತರಗತಿಗೆ ಪ್ರವೇಶ ನೀಡಲಾಗಿದೆ.

ತರಗತಿ ಪ್ರವೇಶಿಸುವ ಮೊದಲು ಸ್ಯಾನಿಟೈಸರ್ ಮಾಡಿ, ಕಡ್ಡಾಯ ಮಾಸ್ಕ್ ಧರಿಸಿದ ವಿದ್ಯಾರ್ಥಿಗಳು ಸುರಕ್ಷಿತ ಅಂತರದೊಂದಿಗೆ ಕುಳಿತುಕೊಂಡಿದ್ದಾರೆ. ತರಗತಿಯ ಪ್ರತಿ ಡೆಸ್ಕ್ ನಲ್ಲಿ ಓರ್ವ ವಿದ್ಯಾರ್ಥಿಯಂತೆ ಶಿಕ್ಷಕರು ತರಗತಿ ನಡೆಸುತ್ತಿದ್ದಾರೆ.

Degree college

Degree college

         

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English