ಮಂಗಳೂರು : ವಿಮಾನ ನಿಲ್ದಾಣದಲ್ಲಿ ಅದಾನಿ ಕಂಪೆನಿಯ ಆನೆಯ ಚಿಹ್ನೆ ತೆರವು ಮಾಡಿ ಹಿಂದೆ ಇದ್ದ ಹುಲಿ ಕುಣಿತದ ಚಿಹ್ನೆಯನ್ನು ತಕ್ಷಣ ಅಳವಡಿಸಬೇಕು ಎಂದು ಮಿಥುನ್ ರೈ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಕಂಪೆನಿಗೆ ಗುತ್ತಿಗೆ ನೀಡಿರುವ ಮೋದಿ ನೇತೃತ್ವದ ಕೇಂದ್ರ ಸರಕಾರವು ಈ ನಿಲ್ದಾಣಕ್ಕೆ ಗೌತಮ್ ಅದಾನಿ ಹೆಸರಿಡುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ ಅವಮಾನ ಮಾಡಿದೆ ಅದಾನಿ ಬದಲಿಗೆ ತುಳುನಾಡಿನ ವೀರರಾದ ಕೋಟಿ-ಚೆನ್ನಯರ ಹೆಸರಿಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಖಾಸಗಿ ಕಂಪೆನಿಗೆ ಗುತ್ತಿಗೆ ನೀಡಿದ್ದರೂ ಅದರ ಹೆಸರು ಬದಲಾವಣೆ ಮಾಡಿಲ್ಲ. ಅದೇರೀತಿ ಗುಜರಾತ್, ಮುಂಬಯಿ ವಿಮಾನ ನಿಲ್ದಾಣಗಳ ಹೆಸರನ್ನು ಬದಲಾಯಿಸಿ ಗುತ್ತಿಗೆ ಕಂಪೆನಿಯ ಹೆಸರನ್ನು ಸೂಚಿಸಿಲ್ಲ. ಆದರೆ ಮಂಗಳೂರು ವಿಮಾನ ನಿಲ್ದಾಣದ ಹೆಸರನ್ನು ಮಾತ್ರ ಏಕೆ ಬದಲಾಯಿಸಲಾಗಿದೆ ಎಂದು ಪ್ರಶ್ನಿಸಿದರು/
ನ.18ರಂದು ಸಂಜೆ ನಗರದ ಸರ್ಕ್ಯೂಟ್ ಹೌಸ್‌ನಿಂದ ವಿಮಾನ ನಿಲ್ದಾಣದ ವರೆಗೆ ಪಂಜಿನ ಮೆರವಣಿಗೆಯೊಂದಿಗೆ ಪ್ರತಿಭಟನಾ ಪ್ರದರ್ಶನ ನಡೆಸಲಾಗುವುದು. ಇದಕ್ಕೆ ಯಾವುದೇ ಸಕರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗದಿದ್ದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಿಥುನ್ ರೈ ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಅಭಯಚಂದ್ರ ಜೈನ್ , ಸದಾಶಿವ ಉಳ್ಳಾಲ್, ವಸಂತ್ ಬೆರ್ನಾರ್ಡ್, ಪಿಯೂಸ್ ಮೊದಲಾದವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English