ಸಹಕಾರಿ ಸಪ್ತಾಹದ ಅಂಗವಾಗಿ ನಂದಿನಿ ಅನ್ ವೀಲ್ಸ್ ವಾಹನಕ್ಕೆ ಚಾಲನೆ

5:16 PM, Wednesday, November 18th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

DKMUL saptahaಮಂಗಳೂರು : ದ.ಕ. ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಆಶ್ರಯದಲ್ಲಿ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ಕುಲಶೇಖರದ ಕೆಎಂಎಫ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ನಂದಿನಿ ಅನ್ ವೀಲ್ಸ್ ವಾಹನಕ್ಕೆ ಚಾಲನೆ ಬುಧವಾರ ಚಾಲನೆ ನೀಡಲಾಯಿತು,

ಕೊರೋನದಿಂದಾಗಿ ಕೆಲ ಸಮಯ ಹಾಲು ಉತ್ಪಾದಕರಿಂದ ಸಂಗ್ರಹಿಸಿದ ಹಾಲನ್ನು ವಿತರಿಸಲು ಸಾಧ್ಯವಾಗದೆ ಕೆಎಂಎಫ್ ನಷ್ಟ ಅನುಭವಿಸಬೇಕಾಯಿತಾದರೂ, ಈಗ ಚೇತರಿಸಿಕೊಳ್ಳುತ್ತಿದೆ. ಹಾಗಾಗಿ ಗ್ರಾಮಾಂತರ ಸೊಸೈಟಿಗೆ ಹಾಲು ಹಾಕುವವರ ಬಗ್ಗೆ ಚಿಂತಿಸಿ ಮುಂದಿನ ಜನವರಿಯಿಂದಲಾದರೂ ಅವರಿಗೆ ಹಿಂದಿನ ಧಾರಣೆ ಸಿಗುವ ವ್ಯವಸ್ಥೆ ಮಾಡಬೇಕು ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.

ಕೊರೋನ ಸಂದರ್ಭದಲ್ಲೂ ಜಿಲ್ಲಾ ಸಹಕಾರಿ ಬ್ಯಾಂಕ್, ಕೆಎಂಎಫ್ ಹಾಗೂ ಕ್ಯಾಂಪ್ಕೋದಂತಹ ಸಹಕಾರಿ ಕ್ಷೇತ್ರಗಳು ಗ್ರಾಮೀಣ ಜನರ ಬದುಕಿಗೆ ಆರ್ಥಿಕ ಸಂಕಲ್ಪ ನೀಡುವಲ್ಲಿ ಸಹಕಾರಿಯಾಗಿವೆ ಎಂದು ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.

ಕೊರೋನದಿಂದಾಗಿ ಹೊರ ದೇಶಗಳಿಂದ ಅಡಿಕೆ ಆಮದಿಗೆ ಕಡಿವಾಣ ಬಿದ್ದ ಹಿನ್ನೆಲೆಯಲ್ಲಿ ಅಡಿಕೆ ಬೆಲೆ ಹೆಚ್ಚಳವಾಗಿ ರೈತರಿಗೆ ಸಹಕಾರಿಯಾಗಿದೆ ಎಂದು ಅವರು ಹೇಳಿದರು.

DKMUL saptahaದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ಉತ್ತಮ ಡೀಲರುಗಳಿಗೆ ಗೌರವ ಹಾಗೂ ಹಾಲು ಉತ್ಪಾದಕರ ಮತ್ತು ಡೀಲರುಗಳ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಕಾರ್ಯಕ್ರಮದಲ್ಲಿ ದ.ಕ. ಹಾಲು ಉತ್ಪಾದಕರ ಒಕ್ಕೂದ ಉಪಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಸಹಕಾರ ಸಂಘಗಳ ಉಪ ನಿಬಂಧಕ ಪ್ರವೀಣ್ ಬಿ. ನಾಯಕ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಜಿಲ್ಲಾ ಸಹಕಾರಿ ಯೂನಿಯನ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಪಿ. ಪುರುಷೋತ್ತಮ ಹಾಗೂ ಒಕ್ಕೂಟದ ನಿರ್ದೇಶಕರು ಉಪಸ್ಥಿತರಿದ್ದರು.

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಾ.ಎಸ್.ಟಿ. ಸುರೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜೆನೆಟ್ ರೊಸಾರಿಯೊ ಕಾರ್ಯಕ್ರಮ ನಿರೂಪಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English