ಮಂಗಳೂರು : ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಮುಲ್ಕಿ, ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡುವಂತೆ ಒತ್ತಾಯಿಸಿ ಬುಧವಾರ ಸಂಜೆ ಪಂಜಿನಮೆರವಣಿಗೆ ನಡೆಸಲಾಯಿತು.
ದ.ಕ. ಜಿಲ್ಲೆಯ ಮಾಜಿ ಸಚಿವ ರಮಾನಾಥ ರೈ ಪಂಜಿನ ಮೆರವಣಿಗೆಗೆ ಕದ್ರಿ ಪಾರ್ಕ್ ಬಳಿ ಚಾಲನೆ ನೀಡಿದರು.
ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು ಇಡುವವರೆಗೆ ನಮ್ಮ ಪ್ರತಿಭಟನೆ ನಿರಂತರವಾಗಿ ಮುಂದುವರೆಯಲಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಅವರು ಅದಾನಿಯ ಕೃಪಾಕಟಾಕ್ಷದಿಂದ ಅಧಿಕಾರಕ್ಕೇರಿದ್ದಾರೆ. ಅವರನ್ನು ಓಲೈಸಲು ಇದೀಗ ವಿಮಾನ ನಿಲ್ದಾಣವನ್ನು ಖಾಸಗಿಕರಣಗೊಳಿಸಲಾಗಿದೆ ಎಂದರು.
ಕಾಲ್ನಡಿಗೆ ಮೂಲಕ ಕದ್ರಿಯಿಂದ ಬಜಪೆ ಸಮೀಪದಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮುಖ್ಯ ರಸ್ತೆಯ ವರೆಗೆ ಪಂಜಿನ ಮೆರವಣಿಗೆ ಸಾಗಿತು. ಕಾಂಗ್ರೆಸ್ ಕಾರ್ಯಕರ್ತರು ಪಂಜಿನ ಮೆರವಣಿಗೆಯಲ್ಲಿ ಭಾಗಿಗಳಾಗಿದ್ದರು.
ಇದೇ ವೇಳೆ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ, ಮಾಜಿ ಶಾಸಕರಾದ ಅಭಯಚಂದ್ರ ಜೈನ್, ಶಕುಂತಳಾ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಎ.ಸಿ. ವಿನಯರಾಜ್ ಮತ್ತಿತರರು ಜೊತೆಗಿದ್ದರು.
Click this button or press Ctrl+G to toggle between Kannada and English