ಡಿ.ಕೆ. ಶಿವಕುಮಾರ್‌ ಪುತ್ರಿ ನಿಶ್ಚಿತಾರ್ಥ ಎಸ್‌.ಎಂ.ಕೃಷ್ಣ ಅವರ ಅಳಿಯನ ಜೊತೆ ನೆರವೇರಿತು

2:43 PM, Thursday, November 19th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Amartyaಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಿರಿಯ ಪುತ್ರಿ ಐಶ್ವರ್ಯ ಹಾಗೂ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ಅಳಿಯ, ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ.ಸಿದ್ದಾರ್ಥ ಹೆಗ್ಡೆ ಅವರ ಹಿರಿಯ ಪುತ್ರ ಅಮಾರ್ತ್ಯ ಹೆಗ್ಡೆ ಅವರ ವಿವಾಹ ನಿಶ್ಚಿತಾರ್ಥವು ನವೆಂಬರ್ 19ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ಖಾಸಗಿ ಹೋಟೆಲ್‍ವೊಂದರಲ್ಲಿ ನೆರವೇರಿತು.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಸಚಿವರಾದ ಡಾ ಕೆ ಸುಧಾಕರ್, ಆರ್. ಅಶೋಕ್, ವಿ.ಸೋಮಣ್ಣ ಸೇರಿದಂತೆ ಹಲವು ಗಣ್ಯರು ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಎರಡೂ ಕುಟುಂಬಗಳ ಆಪ್ತ ಬಂಧುಗಳು, ಸ್ನೇಹಿತರು ಇಂದಿನ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಜೂನ್ 12 ರಂದು ಸದಾಶಿವನಗರದಲ್ಲಿರುವ ಎಸ್‌.ಎಂ. ಕೃಷ್ಣ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಕುಟುಂಬದ ಸದಸ್ಯರು, ತಾಂಬೂಲ ಬದಲಾಯಿಸಿಕೊಂಡು ಅಮಾರ್ತ್ಯ ಮತ್ತು ಐಶ್ವರ್ಯ ಮದುವೆಯನ್ನು ನಿಶ್ಚಯ ಮಾಡಿದ್ದರು. 2021ರ ಫೆಬ್ರವರಿಯಲ್ಲಿ ಇವರಿಬ್ಬರ ವಿವಾಹ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.

ಅಮೆರಿಕದಲ್ಲಿ ಶಿಕ್ಷಣ ಪಡೆದಿರುವ 26 ವರ್ಷದ ಅಮಾರ್ತ್ಯ ಅವರು, ತಾಯಿ ಮಾಳವಿಕಾ ಅವರೊಂದಿಗೆ ಕಾಫಿ ಡೇ ಕಂಪನಿಯ ವ್ಯವಹಾರ ನಿರ್ವಹಿಸುತ್ತಿದ್ದಾರೆ. ಎಂಜಿನಿಯರಿಂಗ್‌ ಪದವೀಧರೆಯಾದ 22 ವರ್ಷದ ಐಶ್ವರ್ಯ ಅವರು ತಂದೆ ಡಿ.ಕೆ.ಶಿವಕುಮಾರ್‌ ಸ್ಥಾಪಿಸಿರುವ ಗ್ಲೋಬಲ್‌ ಅಕಾಡೆಮಿ ಆಫ್‌ ಟೆಕ್ನಾಲಜಿ ಸಂಸ್ಥೆಯನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತಿದ್ಧಾರೆ.

Amartya

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English