ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ರಿಗೆ ಕೋವಿಡ್​ ಸೋಂಕು ದೃಢ

9:32 PM, Thursday, November 19th, 2020
Share
1 Star2 Stars3 Stars4 Stars5 Stars
(No Ratings Yet)
Loading...

DV Sadananda Gowdaಮಂಗಳೂರು  : ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರಿಗೆ ಕೋವಿಡ್ ಸೋಂಕು ದೃಢವಾಗಿದೆ. ಈ ಕುರಿತು ಅಧಿಕೃತವಾಗಿ ಟ್ವಿಟರ್ನಲ್ಲಿ ತಿಳಿಸಿರುವ ಸಚಿವರು, ಕೊರೋನಾ ಸೋಂಕಿನ ಪ್ರಾಥಮಿಕ ಲಕ್ಷಣಗಳ ಹಿನ್ನಲೆ ಪರೀಕ್ಷೆಗೆ ಒಳಗಾಗಿದ್ದೆ. ಈ ವೇಳೆ ಸೋಂಕು ದೃಢಪಟ್ಟಿದೆ. ಈ ಹಿನ್ನಲೆ ಪ್ರತ್ಯೇಕ ವಾಸಕ್ಕೆ ಒಳಗಾಗಿತ್ತಿದ್ದೇನೆ.

ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಒಳಗಾದವರು ಮುಂಜಾಗ್ರತೆ ವಹಿಸುವುದರೊಂದಿಗೆ ಪರೀಕ್ಷೆಗೆ ಒಳಪಡಿ ಎಂದು ಮನವಿ ಮಾಡಿದ್ದಾರೆ. ಇನ್ನು ಸಚಿವರು ಕೊರೋನಾ ಸೋಂಕಿಗೆ ಒಳಗಾಗಿದ್ದ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English