ಹೊಸದಿಲ್ಲಿ: ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ (71 ವರ್ಷ) ಅವರು ಬುಧವಾರ ಮುಂಜಾನೆ 3.30ರ ಸುಮಾರಿಗೆ ನಿಧನರಾಗಿದ್ದಾರೆ. ಸೋನಿಯಾ ಗಾಂಧಿ ಆಪ್ತ ಎಂದೇ ಬಿಂಬಿತವಾಗಿದ್ದ ಕಾಂಗ್ರೆಸ್‌ನ ನಿಷ್ಠಾವಂತ ನಾಯಕ ಅಹ್ಮದ್ ಪಟೇಲ್ ಕಳೆದ ತಿಂಗಳು ಕೊರೊನಾ ಪಾಸಿಟಿವ್ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ
ಅಹ್ಮದ್ ಪಟೇಲ್ ಅವರು ಕೊರೊನಾ ಪಾಸಿಟಿವ್ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರಾದರೂ, ಬಹುಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ. ಇದೀಗ ಅವರ ನಿಧನದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಹ್ಮದ್ ಪಟೇಲ್ ಸುದ್ದಿ ಅಘಾತವನ್ನುಂಟು ಮಾಡಿದ್ದು, ಅವರ ಪುತ್ರ ಫೈಜಲ್ ಜೊತೆ ಮಾತನಾಡಿರುವುದಾಗಿ ಪ್ರಧಾನಿ ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
“ಅಹ್ಮದ್ ಪಟೇಲ್ ಸುದ್ದಿ ಅಘಾತವನ್ನುಂಟು ಮಾಡಿದೆ. ತಮ್ಮ ಬಹುತೇಕ ಜೀವನವನ್ನ ಸಮಾಜ ಸೇವೆಗೆ ಮುಡಿಪಾಗಿಟ್ಟಿದ್ದರು. ಕಾಂಗ್ರೆಸ್ ಪಕ್ಷ ಕಟ್ಟುವಲ್ಲಿ ಅಹ್ಮದ್ ಪಟೇಲ್ ಅವರ ಪಾತ್ರ ಪ್ರಮುಖವಾದದ್ದು. ತಮ್ಮ ಅಗಾಧ ನೆನಪಿನ ಶಕ್ತಿಗೆ ಪಟೇಲರು ಹೆಸರುವಾಸಿಯಾಗಿದ್ದರು. ಪಟೇಲ್ ಅವರ ಪುತ್ರ ಫೈಸಲ್ ಜೊತೆ ಮಾತನಾಡಿದ್ದು, ಅಹ್ಮದ್ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
Click this button or press Ctrl+G to toggle between Kannada and English