ಹಾವೇರಿ: ಏಲಕ್ಕಿ ನಾಡು ಹಾವೇರಿಯಲ್ಲಿಎಂಬತ್ತಾರನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ 2021ರ ಫೆ.26, 27 ಮತ್ತು 28ರಂದು ಮೂರು ದಿನಗಳ ಕಾಲ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ.
ಕಸಾಪ ಅಧ್ಯಕ್ಷ ಡಾ. ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀಧಿರ್ಮಾನ ಕೈಗೊಳ್ಳಲಾಗಿದೆ. ಬಳಿಗಾರ್ ಆಡಳಿತಾವಧಿಯಲ್ಲಿ ನಡೆಯುತ್ತಿರುವ ಐದನೇ ಸಮ್ಮೇಳನ ಇದು. ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ. ಪಾಟೀಲ್ ಹಾಗೂ ಹಾವೇರಿ ಶಾಸಕ ನೆಹರೂ ಓಲೇಕಾರ್ ಅವರೊಂದಿಗೆ ಸಮ್ಮೇಳನದ ಬಗ್ಗೆ ಚರ್ಚಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ,” ಎಂದು ಕಸಾಪ ಅಧ್ಯಕ್ಷ ಡಾ. ಮನು ಬಳಿಗಾರ್ ತಿಳಿಸಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಮನವಿ ಮಾಡಲಾಗುತ್ತದೆ. ಈ ಸಂಬಂಧ ಅಧಿಕಾರಿಗಳೊಂದಿಗೆ ಮತ್ತೊಮ್ಮೆ ಚರ್ಚಿಸಿ ಕೋವಿಡ್ ಮಾರ್ಗಸೂಚಿಗಳ ಅನ್ವಯ ಸಮ್ಮೇಳನ ನಡೆಸಲು ಹಂತ- ಹಂತವಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುವುದು. ಒಂದು ವೇಳೆ ಸಮ್ಮೇಳನದ ವೇಳೆಗೆ ಕೋವಿಡ್ ಸೋಂಕು ಉಲ್ಬಣಗೊಂಡಲ್ಲಿ ಪರಿಸ್ಥಿತಿ ಆಧರಿಸಿ ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು” ಎಂದು ಅವರು ಹೇಳಿದ್ದಾರೆ.
Click this button or press Ctrl+G to toggle between Kannada and English