ರಾಷ್ಟ್ರ ವಿರೋಧಿ ಕೃತ್ಯಗಳನ್ನು ಸಹಿಸಲಾಗದು – ಶಾಸಕ ಕಾಮತ್

6:20 PM, Friday, November 27th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Vedavyas ಮಂಗಳೂರು  : ಬಿಜೈ ಪರಿಸರದಲ್ಲಿ ಕಟ್ಟಡದ ಕಾಂಪೌಂಡ್ ನಲ್ಲಿ ಭಯೋತ್ಪಾದಕ ಸಂಘಟನೆಯಾಗಿರುವ ಲಷ್ಕರ್ ಪರ ಬರಹಗಳು ಕಂಡು ಬಂದಿರುವ ವಿಚಾರಕ್ಕೆ ಸಂಬಂಧಿಸಿ ಶಾಸಕ ವೇದವ್ಯಾಸ್ ಕಾಮತ್ ಅವರು ಪೊಲೀಸ್ ಅಧಿಕಾರಿಗಳ‌ಜೊತೆ ಚರ್ಚಿಸಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಕಾಮತ್, ಮಂಗಳೂರಿನಲ್ಲಿ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯ ಪರವಾಗಿ ಕಂಡು ಬಂದಿರುವ ಗೋಡೆ ಬರಹವು ಆತಂಕಕಾರಿಯಾಗಿದೆ. ಇಂತಹ ರಾಷ್ಟ್ರ ವಿರೋಧಿ ಕೃತ್ಯಗಳನ್ನು ಸಹಿಸಲಾಗದು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಈ ವಿಚಾರವಾಗಿ ಈಗಾಗಲೇ ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದೇನೆ. ಅಪರಾಧಿಗಳನ್ನು ಬಂಧಿಸಿ ಕಠಿಣ ಕ್ರಮ ಜರಗಿಸಲು ಸೂಚನೆ ನೀಡಿದ್ದೇನೆ. ಇಂತಹ ಮನಸ್ಥಿತಿಯನ್ನು ಮೊಳಕೆಯಲ್ಲೇ ಚಿವುಟದಿದ್ದರೆ ಭಯೋತ್ಪಾದನಾ ಚಟುವಟಿಕೆಯ ಬೇರು ಮತ್ತಷ್ಟು ಆಳಕ್ಕೆ ಹೋಗಬಹುದು ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English