ಹೈದಾರಾಬಾದ್‌ನಿಂದ ಮಂಗಳೂರು ನಗರಕ್ಕೆ ಸಾಗಾಟ ಮಾಡುತ್ತಿದ್ದ 24 ಕೆ.ಜಿ. ಗಾಂಜಾ ವಶ

11:21 PM, Friday, November 27th, 2020
Share
1 Star2 Stars3 Stars4 Stars5 Stars
(No Ratings Yet)
Loading...

Ganja ಮಂಗಳೂರು : ನಗರದ ಪಡೀಲ್‌ ಜಂಕ್ಷನ್‌ನಿಂದ ಬಿಕರ್ನಕಟ್ಟೆ ಬರುವ ರಸ್ತೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆಂಧ್ರ ಪ್ರದೇಶದ ಹೈದಾರಾಬಾದ್‌ನಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಸಾಗಾಟ ಮಾಡುತ್ತಿದ್ದ ಸುಮಾರು 24 ಕೆ.ಜಿ. ಗಾಂಜಾ ಸಮೇತ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಕೇರಳದ ಕಾಸರಗೋಡು ನಿವಾಸಿಗಳಾದ ಇಬ್ರಾಹಿಂ ಮಡನ್ನೂರು ಹಾಗೂ ಅಬ್ದುಲ್‌ ನಿಜಾದ್‌ ಎಂದು ಗುರುತಿಸಲಾಗಿದೆ.

ಆರೋಪಿತರಿಂದ 3,60,000 ರೂ. ಮೌಲ್ಯದ ಸುಮಾರು 24 ಕೆ.ಜಿ. ಗಾಂಜಾ ಹಾಗೂ 2 ಲಕ್ಷ ಮೌಲ್ಯದ ಟೂರಿಸ್ಟ್‌ ಕಾರು ಹಾಗೂ 23 ಸಾವಿರ ರೂ. ಮೌಲ್ಯದ ಮೂರು ಮೊಬೈಲ್‌ ಪೋನ್‌ಗಳು ಸೇರಿದಂತೆ ಒಟ್ಟು 5,73,000 ರೂ. ಮೌಲ್ಯದ ಸೊತ್ತನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಟೂರಿಸ್ಟ್‌ ಕಾರು ಮಹಾರಾಷ್ಟ್ರ ನೊಂದಣಿಯದ್ದಾಗಿದೆ.

ಮಂಗಳೂರು ನಗರ ಪೊಲೀಸ್‌ ಆಯುಕ್ತ ವಿಕಾಸ್‌ ಕುಮಾರ್‌ ವಿಕಾಶ್‌ರವರ ಮಾರ್ಗದರ್ಶನದಲ್ಲಿ, ಉಪಪೊಲೀಸ್‌ ಆಯುಕ್ತ ಹರಿರಾಂ ಶಂಕರ ಹಾಗೂ ವಿನಯ ಗಾಂವಕರ್‌ರ ನಿರ್ದೇಶನದಲ್ಲಿ, ಇಕೋನಾಮಿಕ್‌ ಹಾಗೂ ನಾರ್ಕೋಟಿಕ್‌ ಕ್ರೈಂ ಪೊಲೀಸ್‌ ಠಾಣೆಯ ನಿರೀಕ್ಷಕರಾದ ಕೆ.ಕೆ. ರಾಮಕೃಷ್ಣ ಹಾಗೂ ಸಿಬ್ಬಂದಿಗಳು ಯಶಸ್ವಿಯಾಗಿ ಈ ಕಾರ್ಯಚರಣೆ ನಡೆಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English