- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಬಂಟ್ವಾಳ : ಟ್ರಕ್ ಪಲ್ಟಿ ಚಾಲಕ ಮೃತ್ಯು

Bantwala Truck [1]ಬಂಟ್ವಾಳ:  ಬಂಟ್ವಾಳ ತಾಲೂಕಿನ ರಾ.ಹೆ.75ರ ನರಹರಿ ಪರ್ವತ ಬಳಿ ಕೃಷ್ಣಕೋಡಿ ಎಂಬಲ್ಲಿ ನಡೆದಿದ್ದುಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿಯಾದ ಘಟನೆ ನಡೆದಿದೆ, ಗಂಭೀರವಾಗಿ ಗಾಯಗೊಂಡಿದ್ದ ಚಾಲಕ  ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ವೈರ್ಗಳನ್ನು ತುಂಬಿಕೊಂಡು ಹೋಗುತ್ತಿದ್ದ ಟ್ರಕ್, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಾಯಗೊಂಡ ಚಾಲಕ   ಅಕ್ರಮ್ ಬಾಷಾ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಮೆಲ್ಕಾರ್ ಸಂಚಾರ ಠಾಣಾ ಪೋಲೀಸರು ಬೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.